ಹೊಸದಿಗಂತ ಡಿಜಿಟಲ್ ಡೆಸ್ಕ್:
ಒಂದೆಡೆ ಇಸ್ರೇಲ್ – ಹಮಾಸ್ ಉಗ್ರ ಹೋರಾಟ ಮುಂದುವರೆದಿದ್ದು, ಇತ್ತ ಇತ್ಯರ್ಥವಾಗಬೇಕಿದ್ದ ಉಕ್ರೇನ್-ರಷ್ಯಾ ಯುದ್ಧ ಮತ್ತೆ ಮುನ್ನೆಲೆಗೆ ಬಂದಿದೆ. ರಷ್ಯಾದ ಸೈನ್ಯವು ಮತ್ತೊಮ್ಮೆ ಉಕ್ರೇನ್ ಮೇಲೆ ಕ್ಷಿಪಣಿ ದಾಳಿ ಮಾಡಿದ್ದು, ಆರು ಮಂದಿ ಸಾವನ್ನಪ್ಪಿದ್ದಾರೆ.
ಖಾರ್ಕಿವ್‌ನಲ್ಲಿರುವ ಪೋಸ್ಟಲ್ ಡಿಪೋ ಕಟ್ಟಡದ ಮೇಲೆ ರಾತ್ರಿ ಕ್ಷಿಪಣಿ ಹಾರಿಸಲಾಗಿದ್ದು, ಇದರಿಂದ ಡಿಪೋ ಕಟ್ಟಡ ನಾಶವಾಗಿದೆ. ಅದರಲ್ಲಿ ಕೆಲಸ ಮಾಡುತ್ತಿದ್ದ ಆರು ಮಂದಿ ನೌಕರರು ಪ್ರಾಣ ಕಳೆದುಕೊಂಡಿದ್ದಾರೆ. ಇತರೆ 14 ಮಂದಿ ತೀವ್ರವಾಗಿ ಗಾಯಗೊಂಡಿದ್ದು, ಕಟ್ಟಡದ ಅವಶೇಷಗಳಡಿ ಕೆಲವರು ಸಿಲುಕಿಕೊಂಡಿದ್ದಾರೆ ಎನ್ನಲಾಗಿದೆ. ಘಟನೆ ನಡೆದ ತಕ್ಷಣ ರಕ್ಷಣಾ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆಯನ್ನು ತೀವ್ರಗೊಳಿಸಿದ್ದಾರೆ. ಕಟ್ಟಡದ ಅವಶೇಷಗಳಡಿ ಸಿಲುಕಿರುವವರ ರಕ್ಷಣೆಗೆ ಕ್ರಮ ಕೈಗೊಳ್ಳಲಾಗಿದೆ.
ದಾಳಿಯ ವಿಡಿಯೋವನ್ನು ಉಕ್ರೇನ್ ಅಧ್ಯಕ್ಷ ಝೆಲೆನ್ಸ್ಕಿ ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ. ಮೃತರಿಗೆ ತಮ್ಮ ತೀವ್ರ ಸಂತಾಪವನ್ನು ಸೂಚಿಸಿದ್ದಾರೆ. ಉತ್ತರ ಖಾರ್ಕಿವ್‌ನ ಬೆಲ್ಗೊರೊಡ್ ಪ್ರದೇಶದಲ್ಲಿ ರಷ್ಯಾದ ಪಡೆಗಳು S-300 ಕ್ಷಿಪಣಿಗಳನ್ನು ಹಾರಿಸಿದ್ದು, ಅವುಗಳಲ್ಲಿ ಎರಡು ಅಂಚೆ ಡಿಪೋವನ್ನು ಹೊಡೆದುರುಳಿಸಿರುವುದಾಗಿ ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ.
https://twitter.com/i/status/1715828571661390329