ಪ್ರಧಾನಿ ಮೋದಿಗೆ ರಷ್ಯಾ ಅಧ್ಯಕ್ಷ ಪುಟಿನ್ ಕರೆ: ಜಿ20 ಶೃಂಗಸಭೆ ಕುರಿತು ಚರ್ಚೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ (Vladimir Putin) ಪ್ರಧಾನಿ ನರೇಂದ್ರ ಮೋದಿ (Narendra Modi) ಅವರಿಗೆ ಕರೆ ಮಾಡಿ ಮಾತನಾಡಿದ್ದಾರೆ.

ಉಭಯ ನಾಯಕರು ಈ ವೇಳೆ ದ್ವಿಪಕ್ಷೀಯ ಸಹಕಾರದ ಪ್ರಗತಿಯನ್ನು ಪರಿಶೀಲಿಸಿದ್ದಾರೆ. ಇತ್ತೀಚೆಗೆ ಜೋಹಾನ್ಸ್‌ಬರ್ಗ್‌ನಲ್ಲಿ ಮುಕ್ತಾಯಗೊಂಡ ಬ್ರಿಕ್ಸ್ ಶೃಂಗಸಭೆ (BRICS Summit) ಸೇರಿದಂತೆ ಪರಸ್ಪರ ಕಾಳಜಿಯ ಪ್ರಾದೇಶಿಕ ಮತ್ತು ಜಾಗತಿಕ ವಿಷಯಗಳ ಕುರಿತು ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಂಡರು ಎಂದು ಪ್ರಧಾನಮಂತ್ರಿ ಕಚೇರಿ ಹೇಳಿಕೆಯಲ್ಲಿ ತಿಳಿಸಿದೆ.

ಇದೇ ವೇಳೆ ಸೆಪ್ಟೆಂಬರ್ 9 ಮತ್ತು 10 ರಂದು ದೆಹಲಿಯಲ್ಲಿ ನಡೆಯಲಿರುವ ಜಿ 20 ಶೃಂಗಸಭೆಯಲ್ಲಿ ಭಾಗವಹಿಸಲು ಸಾಧ್ಯವಾಗುತ್ತಿಲ್ಲ ಎಂದು ಪುಟಿನ್ ತಿಳಿಸಿದ್ದು, ರಷ್ಯಾವನ್ನು ಅದರ ವಿದೇಶಾಂಗ ಸಚಿವ ಸೆರ್ಗೆ ಲಾವ್ರೊವ್ ಪ್ರತಿನಿಧಿಸುತ್ತಾರೆ ಎಂದು ಅವರು ಹೇಳಿದ್ದಾರೆ. G20 ನ ಭಾರತದ ಅಧ್ಯಕ್ಷತೆಯಲ್ಲಿನ ಎಲ್ಲಾ ಉಪಕ್ರಮಗಳಿಗೆ ರಷ್ಯಾದ ನಿರಂತರ ಬೆಂಬಲಕ್ಕಾಗಿ ಪ್ರಧಾನಿ ಮೋದಿ ಪುಟಿನ್ ಅವರಿಗೆ ಧನ್ಯವಾದ ಹೇಳಿದರು.

ಬಾಹ್ಯಾಕಾಶ ಪರಿಶೋಧನೆ, ಕಾರ್ಯತಂತ್ರದ ಪಾಲುದಾರಿಕೆ ಕುರಿತು ಚರ್ಚಿಸಿದ್ದು, ಭಾರತದ ಚಂದ್ರಯಾನ-3 ದಕ್ಷಿಣ ಧ್ರುವದ ಬಳಿ ಚಂದ್ರನ ಮೇಲೆ ಯಶಸ್ವಿಯಾಗಿ ಲ್ಯಾಂಡಿಂಗ್ ಮಾಡಿದ್ದಕ್ಕಾಗಿ ಪುಟಿನ್ ಮತ್ತೊಮ್ಮೆ ಪ್ರಧಾನಿ ಮೋದಿಯವರಿಗೆ ಅಭಿನಂದನೆಗಳನ್ನು ತಿಳಿಸಿದರು. ಬಾಹ್ಯಾಕಾಶ ಪರಿಶೋಧನೆಯಲ್ಲಿ ದ್ವಿಪಕ್ಷೀಯ ಸಹಕಾರವನ್ನು ಮತ್ತಷ್ಟು ಅಭಿವೃದ್ಧಿಪಡಿಸುವ ಇಚ್ಛೆಯನ್ನು ನಾಯಕರು ಪುನರುಚ್ಚರಿಸಿದರು.

ಭಾರತ, ರಷ್ಯಾ, ಚೀನಾ, ಬ್ರೆಜಿಲ್ ಮತ್ತು ದಕ್ಷಿಣ ಆಫ್ರಿಕಾವನ್ನು ಒಳಗೊಂಡಿರುವ ಉದಯೋನ್ಮುಖ ಆರ್ಥಿಕತೆಗಳ ಬ್ರಿಕ್ಸ್ ಗುಂಪಿನ ಯೋಜಿತ ವಿಸ್ತರಣೆ ಮತ್ತು ಮುಂದಿನ ತಿಂಗಳು ದೆಹಲಿ ಆತಿಥ್ಯ ವಹಿಸಲಿರುವ ಪ್ರಮುಖ ಆರ್ಥಿಕತೆಗಳ ಜಿ 20 ಕ್ಲಬ್‌ನ ಶೃಂಗಸಭೆಯ ಕುರಿತು ಉಭಯ ನಾಯಕರು ಚರ್ಚಿಸಿದರು.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!