Saturday, March 25, 2023

Latest Posts

ತಮ್ಮ ಆತ್ಮೀಯರಿಂದಲೇ ರಷ್ಯಾ ಅಧ್ಯಕ್ಷ ಪುಟಿನ್ ಕೊಲೆಯಾಗುತ್ತಾರೆ: ಉಕ್ರೇನ್ ಅಧ್ಯಕ್ಷ ಝೆಲೆನ್ಸ್ಕಿ

ಹೊಸದಿಗಂತ ಡಿಜಿಟಲ್ ಡೆಸ್ಕ್: 

ಒಂದು ದಿನ ತಮ್ಮ ಆತ್ಮೀಯರಿಂದಲೇ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಕೊಲೆಯಾಗುತ್ತಾರೆ ಎಂದು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಹೇಳಿದ್ದಾರೆ.

ಉಕ್ರೇನ್‌ನ ಮೇಲಿನ ರಷ್ಯಾದ ಆಕ್ರಮಣವಾಗಿ ಒಂದು ವರ್ಷವಾದ ಹಿನ್ನೆಲೆಯಲ್ಲಿ ಸಾಕ್ಷ್ಯಚಿತ್ರವೊಂದನ್ನು ಬಿಡುಗಡೆ ಮಾಡಿದರು. ರಷ್ಯಾದ ಅಧ್ಯಕ್ಷರ ನಾಯಕತ್ವದಲ್ಲಿ ದುರ್ಬಲತೆಯ ಅವಧಿಯು ಬರಲಿದೆ ಎಂದು ಝೆಲೆನ್ಸ್ಕಿ ಹೇಳಿದರು.

ಒಂದಲ್ಲಾ ಒಂದು ಅವರ ಆಪ್ತ ಎನಿಸಿಕೊಂಡಿರುವವರೇ ಅವರ ವಿರುದ್ಧ ತಿರುಗಿಬೀಳುತ್ತಾರೆ. ಅವರ ಆತ್ಮೀಯರೇ ಅವರನ್ನು ಹತ್ಯೆ ಮಾಡುತ್ತಾರೆ ಎಂದರು.

ರಷ್ಯಾ ಅಧ್ಯಕ್ಷ ನಾಯಕತ್ವದಲ್ಲಿ ದುರ್ಬಲತೆಯ ಅವಧಿ ಬರಲಿದೆ. ಅವರ ಆಪ್ತ ವಲಯದವರೇ ಅಧ್ಯಕ್ಷನ ವಿರುದ್ಧ ಕೆಲಸ ಮಾಡಲು ಪ್ರೇರೇಪಿಸಲಿದೆ. ಪರಭಕ್ಷಕಗಳು ಪರಭಕ್ಷಕನನ್ನು ತಿನ್ನುತ್ತವೆ. ಕೊಲೆಗಾರನನ್ನು ಕೊಲ್ಲಲು ಅವರು ಕಾರಣಗಳನ್ನು ಕಂಡುಕೊಳ್ಳುತ್ತಾರೆ. ಇದು ಖಂಡಿತಾ ನಡೆಯುತ್ತದೆ, ಆದರೆ ಯಾವಾಗ ಆಗುತ್ತದೆ ಎಂಬುದು ಹೇಳಲು ಸಾಧ್ಯವಿಲ್ಲ ಎಂದು ಉಕ್ರೇನ್ ಅಧ್ಯಕ್ಷ ಹೇಳಿದ್ದಾರೆ.

ರಷ್ಯಾ ಉಕ್ರೇನ್ ಮೇಲೆ ಯುದ್ಧವನ್ನು ಸಾರಿದ ಬಳಿಕ ಆಗಾಗ ಅಧ್ಯಕ್ಷ ಪುಟಿನ್ ಬಗ್ಗೆ ಅವರ ಆಂತರಿಕ ವಲಯದಲ್ಲೇ ಅಸಮಾಧಾನ ಹೊಂದಿರುವ ಬಗ್ಗೆ ರಷ್ಯಾದಲ್ಲಿ ವರದಿಯಾಗಿದೆ. ಪುಟಿನ್‌ರ ಆಪ್ತ ವಲಯದವರೇ ಅವರ ಬಗ್ಗೆ ಹೆಚ್ಚು ಹತಾಶೆಗೊಂಡಿದ್ದಾರೆ ಎಂದು ಹೇಳಲಾಗಿದೆ.

 

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!