ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಸೆಪ್ಟೆಂಬರ್ ನಲ್ಲಿ ಭಾರತದಲ್ಲಿ ನಡೆಯಲಿರುವ ಜಿ 20 ಶೃಂಗಸಭೆಯಲ್ಲಿ ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಭಾಗವಹಿಸುವುದಿಲ್ಲ ಎಂದು ಕ್ರೆಮ್ಲಿನ್ ವಕ್ತಾರ ಡಿಮಿಟ್ರಿ ಪೆಸ್ಕೊವ್ ಶುಕ್ರವಾರ ಹೇಳಿದ್ದಾರೆ.
ಉಕ್ರೇನ್ನಲ್ಲಿ ವಿಶೇಷ ಮಿಲಿಟರಿ ಕಾರ್ಯಾಚರಣೆಯಿಂದ ಪುಟಿನ್ ವೈಯಕ್ತಿಕವಾಗಿ ಕಾರ್ಯಕ್ರಮಕ್ಕೆ ಹಾಜರಾಗಲು ಸಾಧ್ಯವಿಲ್ಲ ಎಂದು ಪೆಸ್ಕೊವ್ ತಿಳಿಸಿದ್ದಾರೆ.
ರಷ್ಯಾದ ಅಧ್ಯಕ್ಷರು ಕೊನೆಯ ಬಾರಿಗೆ 2019 ರಲ್ಲಿ ಜಪಾನ್ ಒಸಾಕಾದಲ್ಲಿ ನಡೆದ ಜಿ20 ಶೃಂಗಸಭೆಯಲ್ಲಿ ವೈಯಕ್ತಿಕವಾಗಿ ಭಾಗವಹಿಸಿದ್ದರು.
2020 (ರಿಯಾದ್) ಮತ್ತು 2021 (ರೋಮ್) ಶೃಂಗಸಭೆಗಳಲ್ಲಿ, ಪುಟಿನ್ ವರ್ಚುವಲ್ ಆಗಿ ಹಾಜರಿದ್ದರು.