ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತ ತಂಡದ ಋತುರಾಜ್ ಗಾಯಕ್ವಾಡ್ ಗಾಯದ ಕಾರಣ ಶ್ರೀಲಂಕಾ ವಿರುದ್ಧ ನಡೆಯುತ್ತಿರುವ ಟಿ-20 ಸರಣಿಯಿಂದ ಹೊರಬಿದ್ದಿದ್ದಾರೆ.
ಶ್ರೀಲಂಕಾ ವಿರುದ್ಧ ಲಖನೌದಲ್ಲಿ ಮೊದಲ ಪಂದ್ಯದ ಆರಂಭವಾಗುವ ಕೆಲವೇ ಗಂಟೆಗಳಲ್ಲಿ ಮಣಿಕಟ್ಟು ನೋವು ಕಾಣಿಸಿಕೊಂಡ ಹಿನ್ನೆಲೆ ಗಾಯದ ಹೆಚ್ಚಿನ ನಿರ್ವಹಣೆಗಾಗಿ ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಗೆ ಹೋಗಲಿದ್ದಾರೆ ಎಂದು ಬಿಸಿಸಿಐ ಹೇಳಿಕೆ ಬಿಡುಗಡೆ ಮಾಡಿದೆ.
ಹೀಗಾಗಿ ಉಳಿದೆರುಡು ಪಂದ್ಯಗಳಿಗೆ ಗಾಯಕ್ವಾಡ್ ಅವರಿಂದ ತೆರವಾಗಿರುವ ಆರಂಭಿಕ ಸ್ಥಾನಕ್ಕೆ ಕನ್ನಡಿಗ ಮಯಾಂಕ್ ಅಗರ್ವಾಲ್ ಅವರನ್ನು ಸೀನಿಯರ್ ಆಯ್ಕೆ ಸಮಿತಿ ಆಯ್ಕೆ ಮಾಡಿದೆ.
ರುತುರಾಜ್ ವಿಂಡೀಸ್ ವಿರುದ್ಧದ ಕೊನೆಯ ಟಿ-20 ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದಿದ್ದರು, ಅವರನ್ನು ಈ ಸರಣಿಯಲ್ಲಿ ಸಂಪೂರ್ಣವಾಗಿ ಆಡಿಸುವುದಕ್ಕೆ ಮ್ಯಾನೇಜ್ಮೆಂಟ್ ಬಯಸಿತ್ತಾದರೂ ದುರಾದೃಷ್ಟವಶಾತ್ ಸರಣಿಯಿಂದಲೇ ಹೊರಬಿದ್ದಿದ್ದಾರೆ.