Wednesday, September 24, 2025

ಸರಸ್ವತೀ ಸಮ್ಮಾನ್ ಪ್ರಶಸ್ತಿ ಪಡೆದ ಮೊದಲಿಗರು ಎಸ್‌.ಎಲ್‌ ಭೈರಪ್ಪ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಪದ್ಮಭೂಷಣ, ಹಿರಿಯ ಸಾಹಿತಿ ಎಸ್.ಎಲ್.ಭೈರಪ್ಪ ನಿಧನರಾಗಿದ್ದಾರೆ. ಬೆಂಗಳೂರಿನ ರಾಜರಾಜೇಶ್ವರಿನಗರದ ಆಸ್ಪತ್ರೆಯಲ್ಲಿ ಇಂದು (ಸೆಪ್ಟೆಂಬರ್ 24) ಕೊನೆಯುಸಿರೆಳೆದಿದ್ದಾರೆ. 

ಭೈರಪ್ಪನವರ ಕಾದಂಬರಿಗಳು ಜನಪ್ರಿಯವಾಗಿವೆ. ಅವು ಹಲವು ಬಾರಿ ಮರುಮುದ್ರಣಗೊಂಡಿವೆ. ಅವರ ಕೃತಿಗಳು ಮರಾಠಿ, ಇಂಗ್ಲಿಷ್, ಹಿಂದಿ ಮೊದಲಾದ ಭಾಷೆಗಳಿಗೆ ಅನುವಾದವಾಗಿವೆ. ಇವರ ಕಾದಂಬರಿಗಳಿಗಾಗಿ ಸಾಕಷ್ಟು ಪ್ರಶಸ್ತಿಗಳು ಅರಸಿ ಬಂದಿವೆ.

ಸರಸ್ವತೀ ಸಮ್ಮಾನ್ ಪ್ರಶಸ್ತಿ ಪಡೆದ ಕನ್ನಡದ ಮೊದಲಿಗರು ಎಸ್‌.ಎಲ್‌ ಭೈರಪ್ಪ. ಹೌದು, 1999 ರಲ್ಲಿ ಕನಕಪುರದಲ್ಲಿ ನಡೆದ 67ನೇ ಅಖಿಲ ಕರ್ನಾಟಕ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷ ಸ್ಥಾನದ ಗೌರವ ಅವರಿಗೆ ಸಿಕ್ಕಿತು.

ಇದನ್ನೂ ಓದಿ