ಎಸ್‌.ಎಂ. ಕೃಷ್ಣ ಅಂತ್ಯಕ್ರಿಯೆ: 1,000ಕ್ಕೂ ಹೆಚ್ಚು ಪೊಲೀಸರ ನಿಯೋಜನೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಇಂದು ಅವರ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವಗಳೊಂದಿಗೆ ಹುಟ್ಟೂರು ಸೋಮನಹಳ್ಳಿಯಲ್ಲಿ  ನಡೆಯಲಿದೆ. ಈ ಹಿನ್ನೆಲೆ ಅಂತ್ಯಕ್ರಿಯೆ ಸ್ಥಳದಲ್ಲಿ ಸುಮಾರು 1,000ಕ್ಕೂ ಅಧಿಕ ಪೊಲೀಸರನ್ನು ಭದ್ರತೆಗೆ ನಿಯೋಜಿಸಲಾಗಿದೆ.

ಸದ್ಯ ಕೃಷ್ಣರ ಪಾರ್ಥಿವ ಶರೀರವನ್ನು ಮದ್ದೂರಿಗೆ ಕೊಂಡೊಯ್ಯಲಾಗುತ್ತಿದೆ. ಮಾರ್ಗಮಧ್ಯೆ ಕೆಂಗೇರಿ, ರಾಮನಗರ, ಚನ್ನಪಟ್ಟಣದಲ್ಲಿ ಕೆಲಹೊತ್ತು ಸಾರ್ವಜನಿಕ ದರ್ಶನಕ್ಕೆ ಅವಕಾಶ ಕಲ್ಪಿಸಲಾಗುತ್ತದೆ. ಇನ್ನೂ ಅಂತ್ಯಕ್ರಿಯೆ ಸ್ಥಳದಲ್ಲಿ ಡಿಐಜಿ ಬೋರಲಿಂಗಯ್ಯ, ಮಂಡ್ಯ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ನೇತೃತ್ವದಲ್ಲಿ ಬಿಗಿ ಪೊಲೀಸ್‌ ಬಂದೋಬಸ್ತ್‌ ವ್ಯವಸ್ಥೆ ನಿಯೋಜಿಸಲಾಗಿದೆ. ಸ್ಥಳದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ 700ಕ್ಕೂ ಹೆಚ್ಚು ಸಿಬ್ಬಂದಿಯನ್ನ ನಿಯೋಜಿಸಲಾಗಿದೆ. ಇದರೊಂದಿಗೆ ಕೆಎಸ್‌ಆರ್‌ಪಿ, ಡಿಎಆರ್‌ ತುಕಡಿ ಸೇರಿ 1,000ಕ್ಕೂ ಹೆಚ್ಚು ಪೊಲೀಸ್‌ ನಿಯೋಜನೆ ಮಾಡಲಾಗಿದೆ. ಅಗತ್ಯ ಸ್ಥಳಗಳಲ್ಲಿ ಬ್ಯಾರಿಕೇಡ್‌ ಅಳವಡಿಸಲಾಗಿದೆ.

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!