ಎಸ್‌.ಎಂ ಕೃಷ್ಣ ವಿಧಿವಶ: ಕರ್ನಾಟಕದಲ್ಲಿ 3 ದಿನ ಶೋಕಾಚರಣೆ, ನಾಳೆ ರಾಜ್ಯಾದ್ಯಂತ ಸರ್ಕಾರಿ ರಜೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ರಾಜ್ಯ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಎಸ್​ಎಂ ಕೃಷ್ಣ ಅವರು ವಿಧಿವಶರಾಗಿರುವ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಇಂದಿನಿಂದ 3 ದಿನಗಳ ಕಾಲ ಶೋಕಾಚರಣೆ ಘೋಷಣೆ ಮಾಡಿದ್ದು, ಇದೇ ವೇಳೆ ಬುಧವಾರ (ಡಿಸೆಂಬರ್ 11) ರಾಜ್ಯಾದ್ಯಂತ ಸರ್ಕಾರಿ ರಜೆ ಘೋಷಣೆ ಮಾಡಲಾಗಿದೆ.

ಡಿಸೆಂಬರ್​ 10 ರಿಂದ ಡಿಸೆಂಬರ್ 12ರವರೆಗೆ ಶೋಕಾಚರಣೆಗೆ ಘೋಷಣೆ ಮಾಡಲಾಗಿದ್ದು, ಮೂರು ದಿನಗಳ ಕಾಲ ರಾಜ್ಯ ಸರ್ಕಾರದ ಎಲ್ಲಾ ಕಟ್ಟಡಗಳ ಮೇಲೆ ರಾಷ್ಟ್ರಧ್ವಜ ಅರ್ಧಕ್ಕೆ ಹಾರಿಸಿ ಅಗಲಿದ ಹಿರಿಯ ನಾಯಕನಿಗೆ ಶ್ರದ್ಧಾಂಜಲಿ ಸಲ್ಲಿಸಲಾಗುವುದು. ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಲಾಗುವುದು ಎಂದು ಸರ್ಕಾರ ಪ್ರಕಟಣೆಯಲ್ಲಿ ತಿಳಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!