ವಿಜಯನಗರ ಶ್ರೀ ಕೃಷ್ಣದೇವರಾಯ ವಿವಿಯ ನೂತನ ಕುಲಸಚಿವರಾಗಿ ಎಸ್.ಎನ್.ರುದ್ರೇಶ್ ಅಧಿಕಾರ ಸ್ವೀಕಾರ

ಹೊಸದಿಗಂತ ವರದಿ,ಬಳ್ಳಾರಿ:
ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ನೂತನ ಕುಲಸಚಿವರಾಗಿ ಕೆಎಎಸ್ ಅಧಿಕಾರಿಯಾದ ರುದ್ರೇಶ್.ಎಸ್.ಎನ್ ಅವರನ್ನು ನೇಮಕಗೊಳಿಸಿ ಸರ್ಕಾರ ಆದೇಶಿಸಿದೆ.
ಕುಲ ಸಚಿವರಾಗಿದ್ದ ಪ್ರೊ.ಎಸ್.ಸಿ.ಪಾಟೀಲ್ ಅವರು ಬುಧವಾರ ರುದ್ರೇಶ್.ಎಸ್.ಎನ್ ಅವರಿಗೆ ಅಧಿಕಾರ ಹಸ್ತಾಂತರಿಸಿದರು.

ರುದ್ರೇಶ್ ಎಸ್.ಎನ್.ಅವರು, ಈ ಹಿಂದೆ ಬಳ್ಳಾರಿ ಮಹಾನಗರ ಪಾಲಿಕೆಯ ಆಯುಕ್ತರಾಗಿ ಕೆಲಸ ನಿರ್ವಹಿಸಿ ದಕ್ಷ ಹಾಗೂ ಪ್ರಾಮಾಣಿಕ ಅಧಿಕಾರಿ ಎನ್ನುವ ಹೆಸರು ಪಡೆದಿದ್ದರು. ಈ ಸಂದರ್ಭದಲ್ಲಿ ವಿದ್ಯಾಲಯದ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!