ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಿಗ್ ಸ್ಕ್ರೀನ್ ಮೇಲೆ ಕಾಣಿಸಿಕೊಂಡ ಅನೇಕ ನಟ ನಟಿಯರು ಕಿರುತೆರೆಯಲ್ಲಿ ಕಾಣಿಸಿಕೊಳ್ಳುವುದು ಸಾಮಾನ್ಯವಾಗಿದೆ. ಅದೇ ರೀತಿಯಾಗಿ ನಟ, ನಿರ್ದೇಶಕ ಎಸ್. ನಾರಾಯಣ್ ಅವರ ಪುತ್ರ ಪಂಕಜ್ ಕೂಡ ಬಿಗ್ಸ್ಕ್ರೀನ್ ನಿಂದ ಈಗ ಕಿರುತೆರೆಗೆ ಎಂಟ್ರಿ ಕೊಟ್ಟಿದ್ದಾರೆ.
ಪಂಕಜ್ ಹಾಗೂ ರಶ್ಮಿತಾ ಪ್ರಧಾನ ಪಾತ್ರದಲ್ಲಿ ನಟಿಸುತ್ತಿರುವ “ಊರ್ಮಿಳಾ” ಧಾರಾವಾಹಿ ಇದೇ ಜೂನ್ 5 ರಿಂದ ರಾತ್ರಿ 8.30ಕ್ಕೆ ಪ್ರಸಾರವಾಗಲಿದೆ.