Thursday, August 18, 2022

Latest Posts

ಎಸ್.ನವೀನ್ ಗೆ ಮುಖ್ಯಮಂತ್ರಿಗಳ ಚಿನ್ನದ ಪದಕ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………

ಹೊಸ ದಿಗಂತ ವರದಿ, ಹಾವೇರಿ:

ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿರುವುದಕ್ಕಾಗಿ ಬೆಂಗಳೂರು ಅಗ್ನಿಶಾಮಕ ಇಲಾಖೆ ಕಚೇರಿ (ಹೆಬ್ಬಾಳ) ವಾಹನ ಚಾಲಕ ಎಸ್. ನವೀನ್ ಗೆ  ಮುಖ್ಯಮಂತ್ರಿಯವರು ಕರ್ನಾಟಕ ರಾಜ್ಯ ಸರ್ಕಾರದ ವತಿಯಿಂದ ಮುಖ್ಯಮಂತ್ರಿಯವರ ಚಿನ್ನದ ಪದಕವನ್ನು ಪ್ರದಾನ ಮಾಡಿದ್ದಾರೆ.
ಸುಮಾರು 14 ವರ್ಷಗಳಿಂದ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯಲ್ಲಿ ಚಾಲಕರಾಗಿ ಸೇವೆ ಸಲ್ಲಿಸುತ್ತಿದ್ದು, ಈ ಚಾಲಕ ವೃತ್ತಿಯ ಜೊತೆಯಲ್ಲಿ ಅಧಿಕಾರಿಗಳೊಂದಿಗೆ ಹಾಗೂ ತಾಂತ್ರಿಕ ಸಿಬ್ಬಂದಿಯೊಂದಿಗೆ ಅಗ್ನಿ ಅವಘಡ, ತುರ್ತು ಸೇವೆಯ ಸಂದರ್ಭದಲ್ಲಿ ಸಹಾಯ ಮಾಡಲು ಸದಾ ಸಿದ್ದರಿರುತ್ತಾರೆ. 2019 ರಲ್ಲಿ ಧಾರವಾಡದಲ್ಲಿ ನಡೆದ ಕಟ್ಟಡ ಕುಸಿದು ಸಂಭವಿಸಿದ ಅವಘಡದ ಸಂದರ್ಭ
ತಮ್ಮ ಜೀವದ ಹಂಗನ್ನು ತೊರೆದು ಹಲವಾರು ಜೀವಗಳನ್ನು ರಕ್ಷಿಸಿದ ಕೀರ್ತಿಯು ಇವರದಾಗಿರುತ್ತದೆ.
ಈ ರೀತಿ ತಮ್ಮ ಸೇವಾವಧಿಯಲ್ಲಿ, ಅನೇಕ ಅಗ್ನಿ ಅವಘಡ, ತುರ್ತು ಸಂದರ್ಭ ಹಾಗೂ ಜೀವ ರಕ್ಷಣೆ ಕಾರ್ಯದಲ್ಲಿ ಸಲ್ಲಿಸಿರುವ ಅತ್ಯುನ್ನತ ಸೇವೆಯನ್ನು ಹಾಗೂ ಇವರ ಉತ್ತಮ ಕಾರ್ಯದ ನಿರ್ವಹಣೆಯನ್ನು ಪುರಸ್ಕರಸಿ ಕರ್ನಾಟಕ ರಾಜ್ಯ ಸರ್ಕಾರವು ಇಂದು ಮುಖ್ಯಮಂತ್ರಿಯವರಿಂದ ಮಾನ್ಯ ಮುಖ್ಯಮಂತ್ರಿಯವರ ಚಿನ್ನದ ಪದಕವನ್ನು ನೀಡಿ ಗೌರವಿಸಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!