ಚಿತ್ರದುರ್ಗದ ನೂತನ ಜಿಲ್ಲಾಧಿಕಾರಿಯಾಗಿ ಎಸ್. ರಮ್ಯಾ ನೇಮಕ

ಹೊಸದಿಗಂತ ವರದಿ ಚಿತ್ರದುರ್ಗ: ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅವರನ್ನು ವರ್ಗಾವಣೆ ಮಾಡಲಾಗಿದ್ದು, ಅವರ ಸ್ಥಾನಕ್ಕೆ ಕರ್ನಾಟಕ ವಿದ್ಯುತ್ ಕಾರ್ಖಾನೆ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ರಮ್ಯಾ ಎಸ್. ಅವರನ್ನು ಸರ್ಕಾರ ನೂತನ ಜಿಲ್ಲಾಧಿಕಾರಿಯಾಗಿ ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಚಿತ್ರದುರ್ಗದ ನೂತನ ಜಿಲ್ಲಾಧಿಕಾರಿಯಾಗಿ ನೇಮಕಗೊಂಡಿರುವ ರಮ್ಯಾ ಎಸ್. ಅವರು ೨೦೧೩ರ ಬ್ಯಾಚ್‌ನ ಅಧಿಕಾರಿ. ಚಿತ್ರದುರ್ಗದಿಂದ ವರ್ಗಾವಣೆಯಾಗಿರುವ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅವರನ್ನು ಯಾವುದೇ ಸ್ಥಾನ ನಿಯೋಜಿಸಿಲ್ಲ.