ಹೊಸದಿಗಂತ ಡಿಜಿಟಲ್ ಡೆಸ್ಕ್:
ಸೌತ್ ಆಫ್ರಿಕಾ ಟಿ20 ಲೀಗ್‌ನ (SA20) ನಾಲ್ಕನೇ ಸೀಸನ್‌ನಲ್ಲಿ ಸನ್ ರೈಸರ್ಸ್ ಈಸ್ಟರ್ನ್ ಕೇಪ್ ತಂಡ ಮತ್ತೊಮ್ಮೆ ತನ್ನ ಅಧಿಪತ್ಯ ಸ್ಥಾಪಿಸಿದೆ. ಕೇಪ್ ಟೌನ್‌ನ ನ್ಯೂಲ್ಯಾಂಡ್ಸ್ ಮೈದಾನದಲ್ಲಿ ನಡೆದ ರೋಚಕ ಫೈನಲ್ ಪಂದ್ಯದಲ್ಲಿ ಪ್ರಿಟೋರಿಯಾ ಕ್ಯಾಪಿಟಲ್ಸ್ ತಂಡವನ್ನು 6 ವಿಕೆಟ್‌ಗಳಿಂದ ಸೋಲಿಸುವ ಮೂಲಕ ಸನ್ ರೈಸರ್ಸ್ ಮೂರನೇ ಬಾರಿಗೆ ಟ್ರೋಫಿಗೆ ಮುತ್ತಿಕ್ಕಿದೆ.
ಟಾಸ್ ಗೆದ್ದ ಸನ್ ರೈಸರ್ಸ್ ತಂಡದ ನಾಯಕ ಟ್ರಿಸ್ಟನ್ ಸ್ಟಬ್ಸ್ ಮೊದಲು ಬೌಲಿಂಗ್ ಮಾಡುವ ನಿರ್ಧಾರ ಕೈಗೊಂಡರು. ಮೊದಲು ಬ್ಯಾಟ್ ಮಾಡಿದ ಪ್ರಿಟೋರಿಯಾ ಕ್ಯಾಪಿಟಲ್ಸ್ ತಂಡ ನಿಗದಿತ 20 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ 158 ರನ್ ಗಳಿಸಿತು.
159 ರನ್‌ಗಳ ಸಾಧಾರಣ ಗುರಿಯನ್ನು ಬೆನ್ನಟ್ಟಿದ ಸನ್ ರೈಸರ್ಸ್ ಈಸ್ಟರ್ನ್ ಕೇಪ್ ತಂಡ, ಸಂಘಟಿತ ಬ್ಯಾಟಿಂಗ್ ಪ್ರದರ್ಶನದ ನೆರವಿನಿಂದ 19.2 ಓವರ್‌ಗಳಲ್ಲಿ 4 ವಿಕೆಟ್ ಕಳೆದುಕೊಂಡು ಗುರಿ ತಲುಪಿತು. ಈ ಭರ್ಜರಿ ಜಯದೊಂದಿಗೆ ಟ್ರೋಫಿಯನ್ನು ತನ್ನದಾಗಿಸಿಕೊಂಡಿತು.
ಸೌತ್ ಆಫ್ರಿಕಾ ಟಿ20 ಲೀಗ್ ಆರಂಭವಾದಾಗಿನಿಂದ ಸನ್ ರೈಸರ್ಸ್ ಈಸ್ಟರ್ನ್ ಕೇಪ್ ತಂಡ ಅತ್ಯಂತ ಸ್ಥಿರ ಪ್ರದರ್ಶನ ನೀಡುತ್ತಾ ಬಂದಿದೆ.
2023: ಚಾಂಪಿಯನ್
2024: ಚಾಂಪಿಯನ್
2025: ರನ್ನರ್ ಅಪ್
2026: ಚಾಂಪಿಯನ್
ಕಳೆದ ಬಾರಿ ಫೈನಲ್‌ನಲ್ಲಿ ಎಡವಿದ್ದ ಸನ್ ರೈಸರ್ಸ್, ಈ ಬಾರಿ ಭರ್ಜರಿಯಾಗಿ ಕಮ್‌ಬ್ಯಾಕ್ ಮಾಡುವ ಮೂಲಕ ಲೀಗ್‌ನ ಅತ್ಯಂತ ಯಶಸ್ವಿ ತಂಡ ಎನಿಸಿಕೊಂಡಿದೆ.




