ಸಾಲು ಮರದ ತಿಮ್ಮಕ್ಕನಿಗೆ ಮತ್ತೆ ಅನಾರೋಗ್ಯ, ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ವೃಕ್ಷಮಾತೆ ಸಾಲು ಮರದ ತಿಮ್ಮಕ್ಕನವರು ಮತ್ತೆ ಅನಾರೋಗ್ಯಕ್ಕೊಳಗಾಗಿದ್ದಾರೆ. ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.  ಮೊನ್ನೆಯಷ್ಟೇ ಕಾಲುಜಾರಿ ಬಿದ್ದು, ಚಿಕಿತ್ಸೆ ಪಡೆದ ತಿಮ್ಮಕ್ಕನವರು ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಆಗಿದ್ದರು. ಇದೀಗ ಮತ್ತೆ ಉಸಿರಾಟದ ತೊಂದರೆಯಿಂದಾಗಿ ಪುನಃ ಹಾಸದಿಂದ ಬೆಂಗಳೂರಿನ ಅಪೊಲೋ ಆಸ್ಪತ್ರೆಗೆ ಶಿಫ್ಟ್‌ ಮಾಡಲಾಗಿದೆ.

ಇದೀಗ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದ್ದು, ಚಿಕಿತ್ಸೆ ಮುಂದುವರಿದಿದೆ ಎಂದು ದತ್ತು ಪುತ್ರ ಬಳ್ಳೂರು ಉಮೇಶ್ ಹೇಳಿದರು. ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹಾಸನದಲ್ಲಿ ಶೀತದ ವಾತಾವರಣದಿಂದ ಹೀಗಾಗಿದೆ. ಬೇಲೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿದರೂ ಸರಿಹೋಗದ ಕಾರಣ, ಇಲ್ಲಿಗೆ ಕರೆತರಲಾಗಿದೆ ಎಂದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!