ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Saturday, July 31, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಮಹಾ ಲಸಿಕೆ ಅಭಿಯಾನಕ್ಕೆ ಸಾಥ್ ನೀಡಿದ ದೇಶವಾಸಿಗಳು: ಇಂದು ಒಂದೇ ದಿನ ದಾಖಲೆಯ 75 ಲಕ್ಷಕ್ಕೂ ಅಧಿಕ ಮಂದಿಗೆ ವ್ಯಾಕ್ಸೀನ್!

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
……………………………………………………

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ದೇಶಾದ್ಯಂತ ಇಂದು ನಡೆದ ಮಹಾ ಲಸಿಕೆ ಅಭಿಯಾನದಲ್ಲಿ 75 ಲಕ್ಷಕ್ಕೂ ಅಧಿಕ ಮಂದಿಗೆ ಕೋವಿಡ್ ಲಸಿಕೆ ನೀಡಲಾಗಿದೆ.
ವ್ಯಾಕ್ಸಿನೇಷನ್ ಗಾಗಿ ಪರಿಷ್ಕೃತ ಮಾರ್ಗಸೂಚಿಗಳೊಂದಿಗೆ ಇಂದು ಕಿಕ್ ಸ್ಟಾರ್ಟ್ ಆಗಿದ್ದು, ಸಂಜೆಯವರೆಗೆ ಇಷ್ಟೊಂದು ಸಂಖ್ಯೆಯ ಜನರಿಗೆ ಲಸಿಕೆ ನೀಡಲಾಗಿದೆ.
ದೇಶದಲ್ಲಿ ಇಂದು ಒಂದೇ ದಿನ 50 ಲಕ್ಷ ಡೋಸ್ ಲಸಿಕೆ ನೀಡಿಕೆಯ ಗುರಿ ಇತ್ತು. ಆದರೆ ಸಂಜೆ 5 ರವರೆಗೆ 69.25 ಲಕ್ಷ ಡೋಸ್ ಲಸಿಕೆ ನೀಡಿಕೆ ಹೊಸ ದಾಖಲೆ ಬರೆಯಲಾಗಿದೆ. ಏಪ್ರಿಲ್ ಪ್ರಾರಂಭದಲ್ಲಿ ಒಂದೇ ದಿನ 43 ಲಕ್ಷ ಡೋಸ್ ಲಸಿಕೆ ನೀಡಿದ್ದು ಇದುವರೆಗಿನ ಗರಿಷ್ಠ ದಾಖಲೆ ಆಗಿತ್ತು. ಆದರೆ ಇಂದು ಒಂದೇ ದಿನ 70 ಲಕ್ಷ ಡೋಸ್ ವರೆಗೂ ಲಸಿಕೆ ವಿರಿಸಲಾಗಿದೆ.
ಇನ್ನು ಲಸಿಕೆ ಮಹಾ ಅಭಿಯಾನದಲ್ಲಿ ಕರ್ನಾಟಕ ಇಡೀ ದೇಶದಲ್ಲಿಯೇ ಎರಡನೇ ಸ್ಥಾನದಲ್ಲಿದೆ. ಇಂದು ಸಂಜೆ 7 ಗಂಟೆಯವರೆಗೆ ರಾಜ್ಯದಲ್ಲಿ 10.36 ಲಕ್ಷ ಮಂದಿಗೆ ಲಸಿಕೆ ನೀಡಲಾಗಿದ್ದು, ಇದುವರೆಗೆ 1.96 ಕೋಟಿ ಜನರಿಗೆ ನೀಡಲಾಗಿದೆ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಮಾಹಿತಿ ನೀಡಿದ್ದಾರೆ.
ಮಧ್ಯಪ್ರದೇಶದಲ್ಲಿ ಇಂದು 14,71,936 ಜನರಿಗೆ ಲಸಿಕೆ ನೀಡಲಾಗಿದ್ದು, ಕರ್ನಾಟಕದಲ್ಲಿ 10,36,523 ಹಾಗೂ ಉತ್ತರ ಪ್ರದೇಶದಲ್ಲಿ 6,57,689 ಜನರಿಗೆ ಲಸಿಕೆ ನೀಡಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss