Tuesday, November 4, 2025

ಶಬರಿಮಲೆ ಚಿನ್ನ ನಾಪತ್ತೆ ಪ್ರಕರಣ: ಮಾಜಿ ಕಾರ್ಯನಿರ್ವಾಹಕ ಅಧಿಕಾರಿ ಅರೆಸ್ಟ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಶಬರಿಮಲೆ ದೇಗುಲ ಚಿನ್ನ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೇವಸ್ಥಾನದ ಮಾಜಿ ಕಾರ್ಯನಿರ್ವಾಹಕ ಅಧಿಕಾರಿ ಸುಧೀಶ್ ಕುಮಾರ್‌ರನ್ನು ಎಸ್‌ಐಟಿ (SIT) ಬಂಧಿಸಿದೆ.

ತಿರುವನಂತಪುರದ ಅಪರಾಧ ಶಾಖೆಯ ಕಚೇರಿಯಲ್ಲಿ ಎಸ್‌ಐಟಿ ವಿಚಾರಣೆ ನಡೆಸಿದ ನಂತರ ಕುಮಾರ್ ಅವರನ್ನು ಬಂಧಿಸಲಾಯಿತು. ಕುಮಾರ್ 2019ರಲ್ಲಿ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಸೇವೆ ಸಲ್ಲಿಸಿದ್ದರು.

ಆ ಸಮಯ ದ್ವಾರಪಾಲಕ (ರಕ್ಷಕ ದೇವರು) ವಿಗ್ರಹಗಳನ್ನು ಚಿನ್ನದಿಂದ ಲೇಪಿಸಲಾಗಿದ್ದು, ದೇವಾಲಯದ ಅಧಿಕೃತ ದಾಖಲೆಗಳಲ್ಲಿ ತಾಮ್ರದ ಹಾಳೆಗಳಾಗಿ ದಾಖಲಿಸಲಾಗಿದೆ ಎಂದು ಮರೆಮಾಚಿದ್ದಾರೆ ಎಂದು ಆರೋಪಿಸಲಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಆಡಳಿತ ಅಧಿಕಾರಿ ಬಿ ಮುರಾರಿ ಬಾಬು ಅವರನ್ನು ಸಹ ಅಧಿಕಾರಿಗಳು ಬಂಧಿಸಿದ್ದಾರೆ.

ಪ್ರಮುಖ ಆರೋಪಿ ಬೆಂಗಳೂರು ಮೂಲದ ಉದ್ಯಮಿ ಉನ್ನಿಕೃಷ್ಣನ್ ಪೊಟ್ಟಿ ಬಂಧನದ ಕೆಲವು ದಿನಗಳ ನಂತರ ಈ ಬೆಳವಣಿಗೆ ನಡೆದಿದೆ.

error: Content is protected !!