ಹೊಸದಿಗಂತ ಡಿಜಿಟಲ್ ಡೆಸ್ಕ್:
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ ಸ್ಮಾರ್ಟ್ ಕ್ರಿಯೇಷನ್ಸ್‌ನ ಸಿಇಒ ಪಂಕಜ್ ಭಂಡಾರಿ ಮತ್ತು ಬಳ್ಳಾರಿಯಲ್ಲಿ ನೆಲೆಸಿರುವ ಆಭರಣ ವ್ಯಾಪಾರಿ ಗೋವರ್ಧನ್‌ರನ್ನು ಬಂಧಿಸಿದೆ.
ಪಂಕಜ್ ಭಂಡಾರಿ ದ್ವಾರಪಾಲಕ ಮೂರ್ತಿಗಳನ್ನು ಕೆಲಸಕ್ಕಾಗಿ ತೆಗೆದುಕೊಂಡ ಹೋದ ನಂತರ ಅವುಗಳ ತೂಕ ಕಡಿಮೆಯಾಗಿದೆ. ಮೂರ್ತಿಯಿಂದ ತೆಗೆದ ಚಿನ್ನವನ್ನು ಗೋವರ್ಧನ್ ಅವರಿಗೆ ಮಾರಾಟ ಮಾಡಿದ್ದಾರೆ ಎಂದು ಎಸ್‌ಐಟಿ ಆರೋಪಿಸಿದೆ.
ಅಕ್ಟೋಬರ್ 28 ರಂದು ಆರಂಭಿಕ ತನಿಖೆಯ ಭಾಗವಾಗಿ ಎಸ್‌ಐಟಿ ಗೋವರ್ಧನ್ ಅವರ ಆಭರಣ ಅಂಗಡಿಯ ಮೇಲೆ ದಾಳಿ ನಡೆಸಿತ್ತು. ಈ ವೇಳೆ ಈ ಹಗರಣದಲ್ಲಿ ತನ್ನ ಪಾತ್ರವಿಲ್ಲ. ಚಿನ್ನದ ಹೊದಿಕೆಯ ಬಾಗಿಲಿಗೆ ದೇಣಿಗೆಯಾಗಿ ಹಣ ನೀಡಿದ್ದೇನೆ ಎಂದು ಹೇಳಿಕೊಂಡಿದ್ದರು.
ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ ಅವರು 2019 ರಲ್ಲಿ ದೇವಾಲಯಕ್ಕೆ ಚಿನ್ನದ ಲೇಪಿತ ಬಾಗಿಲನ್ನು ಸಮರ್ಪಣೆ ಮಾಡುವ ಉದ್ದೇಶದಿಂದ ನನ್ನನ್ನು ಸಂಪರ್ಕಿಸಿದ್ದರು. ಬಳ್ಳಾರಿಯಲ್ಲಿ ನಿರ್ಮಿಸಲಾದ ಹೊಸ ಬಾಗಿಲನ್ನು ಶಬರಿಮಲೆ ದೇವಸ್ಥಾನಕ್ಕೆ ಸಾಗಿಸುವ ಮೊದಲು ಅವರ ಆಭರಣ ಅಂಗಡಿಯಲ್ಲಿ ಪ್ರದರ್ಶಿಸಲಾಗಿತ್ತು ಗೋವರ್ಧನ್ ತಿಳಿಸಿದ್ದರು.

