ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೇರಳದ ಮಂಚೇರಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಅಯ್ಯಪ್ಪ ಸ್ವಾಮಿ ಮಾಲಾಧಾರಿಗಳಿದ್ದ ಟೆಂಪೋ ಟ್ರಾವೆಲರ್ ಮತ್ತು ಆಟೋ ರಿಕ್ಷಾ ಡಿಕ್ಕಿಯಾಗಿದ್ದು,ಇಬ್ಬರು ಮಕ್ಕಳು ಸೇರಿ ಐವರು ಸಾವನ್ನಪ್ಪಿದ ಘಟನೆ ನಡೆದಿದೆ.
ಅಪಘಾತದಲ್ಲಿ ಆಟೋ ರಿಕ್ಷಾ ಚಾಲಕ ಅಬ್ದುಲ್ ಮಜೀದ್ (50) ಮತ್ತು ಪ್ರಯಾಣಿಕರಾದ ಥೆಸ್ಲೀಮಾ (34) ಮುಹ್ಸಿನಾ (32) ಮತ್ತು ಅವರ ಮಕ್ಕಳಾದ ರೈಹಾ ಫಾತಿಮಾ (4) ಮತ್ತು ರಿನ್ಶಾ ಫಾತಿಮಾ (7) ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಕರ್ನಾಟಕದ ಅಯ್ಯಪ್ಪ ಸ್ವಾಮಿ ಮಾಲಾಧಾರಿಗಳಿದ್ದ ಟೆಂಪೋ ಟ್ರಾವೆಲರ್ ಮಂಚೇರಿ ಬಳಿ ಆಟೋ ರಿಕ್ಷಾದೊಂದಿಗೆ ಮುಖಾಮುಖಿಯಾಗಿದೆ ಎಂದು ಅವರು ಹೇಳಿದ್ದಾರೆ.
ಘಟನೆಯಲ್ಲಿ ಐವರು ಶಬರಿಮಲೆ ಯಾತ್ರಾರ್ಥಿಗಳು ಗಾಯಗೊಂಡಿದ್ದಾರೆ .