Wednesday, August 10, 2022

Latest Posts

ಮುಕೇಶ್‌ ಅಂಬಾನಿ ನಿವಾಸದ ಬಳಿ ಸ್ಫೋಟಕ ಪತ್ತೆ ಪ್ರಕರಣ: ಎನ್‌ಐಎ ಮುಂದೆ ಹಾಜರಾದ ಸಚಿನ್ ವಾಜೆ

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ಉದ್ಯಮಿ ಮುಕೇಶ್‌ ಅಂಬಾನಿ ಅವರ ಮುಂಬೈ ನಿವಾಸದ ಸಮೀಪ ಸ್ಫೋಟಕ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳದ (ಎನ್‌ಐಎ) ಮುಂದೆ ಶನಿವಾರ ಪೊಲೀಸ್ ಅಧಿಕಾರಿ ಸಚಿನ್ ವಾಜೆ ಹಾಜರಾಗಿದ್ದಾರೆ.
ಮುಂಬೈ ನ ಕುಂಬಲ್ಲಾ ಬೆಟ್ಟದಲ್ಲಿರುವ ಎನ್‌ಐಎ ಕಚೇರಿಗೆ ಶನಿವಾರ ಬೆಳಿಗ್ಗೆ 11.30ಕ್ಕೆ ಹಾಜರಾದ ಸಚಿನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‌ಐಎಗೆ ಮಾಹಿತಿ ನೀಡಿದರು.
ಫೆ. 25ರಂದು ಮುಕೇಶ್ ಅಂಬಾನಿ ಅವರ ನಿವಾಸ ಬಳಿ ಸ್ಫೋಟಕ ತುಂಬಿದ್ದ ವಾಹನ ಪತ್ತೆಯಾಗಿತ್ತು. ಮುಕೇಶ್ ಅವರ ನಿವಾದ ಬಳಿ ಪತ್ತೆಯಾಗಿದ್ದ ವಾಹನವು ಮನ್‌ಸುಖ್ ಹಿರೇನ್ ಅವರಿಗೆ ಸೇರಿದ್ದಾಗಿತ್ತು, ಈ ವಾಹನ ಕಳವಾಗಿದ್ದ ಕುರಿತು ವಾರದ ಹಿಂದೆಯಷ್ಟೇ ಹಿರೇನ್ ಅವರು ಪೊಲೀಸರಿಗೆ ದೂರು ನೀಡಿದ್ದರು. ಇದಾದ ಕೆಲವೇ ದಿನಗಳಲ್ಲಿ ಮಾರ್ಚ್ 5ರಂದು ಹಿರೇನ್ ಅವರ ಶವವು ಠಾಣೆ ಸಮೀಪ ಪತ್ತೆಯಾಗಿತ್ತು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss