ತಲೆ ಎತ್ತಲಿದೆ ಕ್ರಿಕೆಟ್ ದೇವರ ಬೃಹತ್ ಪ್ರತಿಮೆ: ಅಭಿಮಾನಿಗಳಿಗೆ ಖುಷಿಯೋ ಖುಷಿ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಶೀಘ್ರದಲ್ಲೇ ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್ ಪ್ರತಿಮೆ ಸ್ಥಾಪನೆಯಾಗಲಿದೆ. ಮಾಸ್ಟರ್ ಬ್ಲಾಸ್ಟರ್ ಆಗಿ ವೃತ್ತಿ ಜೀವನದಲ್ಲಿ ಹಲವು ದಾಖಲೆಗಳನ್ನು ತಿದ್ದಿ ಬರೆದಿರುವ ಸಚಿನ್ ಗೆ ಅಪರೂಪದ ಗೌರವ ಲಭಿಸಲಿದೆ. ಸಚಿನ್ ಕೊನೆಯ ಅಂತಾರಾಷ್ಟ್ರೀಯ ಪಂದ್ಯ ಆಡಿದ ವಾಂಕೆಡೆ ಸ್ಟೇಡಿಯಂನಲ್ಲಿ ಶೀಘ್ರದಲ್ಲೇ ಅವರ ಪ್ರತಿಮೆ ಸ್ಥಾಪನೆಯಾಗಲಿದೆ. ಸಚಿನ್ ಶೀಘ್ರದಲ್ಲೇ 50 ವರ್ಷ ಪೂರೈಸಲಿರುವ ಹಿನ್ನೆಲೆಯಲ್ಲಿ ಮುಂಬೈ ಕ್ರಿಕೆಟ್ ಸಂಸ್ಥೆ ಈ ನಿರ್ಧಾರ ಕೈಗೊಂಡಿದೆ.

ಏಪ್ರಿಲ್ 24 ರಂದು ಸಚಿನ್ ಅವರ ಜನ್ಮದಿನದಂದು ಅಥವಾ ಈ ವರ್ಷದ ಕೊನೆಯಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್‌ನಲ್ಲಿ ಪ್ರತಿಮೆಯನ್ನು ಅನಾವರಣಗೊಳಿಸಲಾಗುವುದು ಎಂದು ಮುಂಬೈ ಕ್ರಿಕೆಟ್ ಸಂಸ್ಥೆಯ ಅಧ್ಯಕ್ಷ ಅಮೋಲ್ ಕಾಳೆ ಹೇಳಿದ್ದಾರೆ.

ಏಪ್ರಿಲ್ 24, 1973 ರಂದು ಮುಂಬೈನಲ್ಲಿ ಜನಿಸಿದ ಸಚಿನ್ 1989 ರಲ್ಲಿ ಅಂತರಾಷ್ಟ್ರೀಯ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದರು. ಟೆಸ್ಟ್, ಏಕದಿನ ಮತ್ತು ಟಿ20ಯಲ್ಲಿ ಒಟ್ಟು 664 ಅಂತರಾಷ್ಟ್ರೀಯ ಪಂದ್ಯಗಳನ್ನು ಆಡಿರುವ ಸಚಿನ್ 34,357 ರನ್ ಗಳಿಸಿದ್ದಾರೆ.

ಸಚಿನ್ ಪಯಣದಲ್ಲಿ ಲೆಕ್ಕವಿಲ್ಲದಷ್ಟು ಶ್ರೇಷ್ಠ ಇನ್ನಿಂಗ್ಸ್‌ಗಳಿವೆ. ಆಸ್ಟ್ರೇಲಿಯಾ ವಿರುದ್ಧ 144 ಇನ್ನಿಂಗ್ಸ್‌ಗಳಲ್ಲಿ 50 ಸರಾಸರಿಯಲ್ಲಿ 6,707 ರನ್ ಗಳಿಸಿದರು. ಇದರಲ್ಲಿ 20 ಶತಕಗಳಿವೆ. ಆಸ್ಟ್ರೇಲಿಯಾ ತಂಡದ ವಿರುದ್ಧ ಯಾವುದೇ ಆಟಗಾರ ಇಷ್ಟು ರನ್ ಗಳಿಸಿಲ್ಲ. ಆ ಸಮಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಸಚಿನ್ 20 ಶತಕಗಳನ್ನು ಗಳಿಸಿದ್ದರು ಹಾಗಾಗಿಯೇ ಅವರನ್ನು ಕ್ರಿಕೆಟ್ ದೇವರು ಎಂದು ಕರೆಯಲಾಗುತ್ತದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!