ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಛತ್ತೀಸ್‌ಗಢದಲ್ಲಿ ನಕ್ಸಲರು ನಡೆಸಿದ ಐಇಡಿ ಸ್ಫೋಟದಲ್ಲಿ ಜಿಲ್ಲಾ ರಿಸರ್ವ್ ಗಾರ್ಡ್‌ನ (ಡಿಆರ್‌ಜಿ) 8 ಯೋಧರು ಮತ್ತು ಓರ್ವ ಚಾಲಕ ಸಾವನ್ನಪ್ಪಿದ್ದಾರೆ.
ಈ ಹತ್ಯೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ತೀವ್ರವಾಗಿ ಪ್ರತಿಕ್ರಿಯಿಸಿದ್ದು,ಮಾರ್ಚ್ 2026ರೊಳಗೆ ಕೇಂದ್ರ ಸರ್ಕಾರವು ಭಾರತದಿಂದ ನಕ್ಸಲಿಸಂ ಅನ್ನು ತೊಡೆದುಹಾಕುತ್ತದೆ ಎಂದು ಭರವಸೆ ನೀಡುತ್ತೇವೆ. ಸೈನಿಕರ ಪ್ರಾಣ ತ್ಯಾಗ ವ್ಯರ್ಥವಾಗಲು ಬಿಡುವುದಿಲ್ಲ ಎಂದು ಹೇಳಿದ್ದಾರೆ.
ಛತ್ತೀಸ್‌ಗಢದ ಬಿಜಾಪುರದಲ್ಲಿ ಐಇಡಿ ಸ್ಫೋಟದಲ್ಲಿ ಡಿಆರ್‌ಜಿ ಯೋಧರನ್ನು ಕಳೆದುಕೊಂಡ ಸುದ್ದಿಯಿಂದ ನಾನು ತೀವ್ರ ದುಃಖಿತನಾಗಿದ್ದೇನೆ. ವೀರ ಯೋಧರ ಕುಟುಂಬಗಳಿಗೆ ನನ್ನ ಸಂತಾಪವನ್ನು ವ್ಯಕ್ತಪಡಿಸುತ್ತೇನೆ. ಈ ದುಃಖವನ್ನು ಪದಗಳಲ್ಲಿ ವ್ಯಕ್ತಪಡಿಸುವುದು ಅಸಾಧ್ಯ. ಆದರೆ, ನಮ್ಮ ಸೈನಿಕರ ತ್ಯಾಗ ವ್ಯರ್ಥವಾಗುವುದಿಲ್ಲ ಎಂದು ನಾನು ನಿಮಗೆ ಭರವಸೆ ನೀಡುತ್ತೇನೆ. ನಾವು ಮಾರ್ಚ್ 2026ರೊಳಗೆ ನಕ್ಸಲಿಸಂ ಅನ್ನು ಭಾರತದಲ್ಲಿ ಕೊನೆಗೊಳಿಸುತ್ತೇವೆ ಎಂದು ಅವರು ಹೇಳಿದ್ದಾರೆ.
ಇಂದು ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ನಕ್ಸಲರು ಸೈನಿಕರಿದ್ದ ವಾಹನವನ್ನು ಐಇಡಿಯಿಂದ ಸ್ಫೋಟಿಸಿದ ನಂತರ ಜಿಲ್ಲಾ ರಿಸರ್ವ್ ಗಾರ್ಡ್ (ಡಿಆರ್‌ಜಿ)ನ 8 ಸೈನಿಕರು ಮತ್ತು ಓರ್ವ ಚಾಲಕ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ದಾಂತೇವಾಡ ಜಿಲ್ಲಾ ಮೀಸಲು ಪಡೆಯ 8 ಯೋಧರು, ಓರ್ವ ಚಾಲಕ ಹುತಾತ್ಮರಾಗಿದ್ದಾರೆ. ಈ ಸ್ಫೋಟದಲ್ಲಿ ಕೆಲವು ಯೋಧರಿಗೆ ಗಾಯವಾಗಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.