ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಪ್ರಧಾನಿ ನರೇಂದ್ರ ಮೋದಿ ರಷ್ಯಾ ಪ್ರವಾಸಕ್ಕೆ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅಸಮಾಧಾನ ಹೊರ ಹಾಕಿದ್ದಾರೆ.
ಭಾರತದ ಪ್ರಧಾನಿ ಮೋದಿ ಪ್ರಪಂಚದ ಅತಿದೊಡ್ಡ ಕೊಲೆಗಡುಕನನ್ನು ಆಲಂಗಿಸಿಕೊಂಡಿದ್ದಾರೆ ಎಂದು ಪುಟಿನ್ ವಿರುದ್ಧ ಕಿಡಿ ಕಾರಿದ್ದಾರೆ. ಮೋದಿಯವರ ಮಾಸ್ಕೋ ಭೇಟಿ ನಿರಾಶದಾಯಕ ಮತ್ತು ಶಾಂತಿ ಪ್ರಯತ್ನಗಳ ಮೇಲಿನ ಬಹುದೊಡ್ಡ ಹೊಡೆತ ಎಂದು ಕರೆದಿದ್ದಾರೆ.
ಪ್ರಧಾನಿ ಮೋದಿ ರಷ್ಯಾಗೆ ತೆರಳಿದ್ದು, ಅಲ್ಲಿ ಪುಟಿನ್ ಅವರನ್ನು ಅಪ್ಪಿಕೊಂಡು ಸ್ವಾಗತಿಸಿದ್ದರು. ಈ ಫೊಟೋ ಸಾಮಾಜಿಕ ಜಾಲತಾಣ ವೈರಲ್ ಆಗಿತ್ತು. ಇನ್ನು ಮೋದಿ ಭೇಟಿಗೂ ಕೆಲವೇ ಗಂಟೆ ಮುನ್ನ ಅಂದರೆ ಸೋಮವಾರ ಮುಂಜಾನೆ ರಷ್ಯಾದ ಕ್ಷಿಪಣಿಗಳು ಉಕ್ರೇನಿಯನ್ ನಗರಗಳ ಮೇಲೆ ದಾಳಿ ಮಾಡಿದ್ದು, ಕನಿಷ್ಠ 37 ಜನರು ಸಾವನ್ನಪ್ಪಿದ್ದಾರೆ ಮತ್ತು 170 ಜನರು ಗಾಯಗೊಂಡಿದ್ದಾರೆ.
ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್‌ವೊಂದನ್ನು ಮಾಡಿರುವ ಝೆಲೆನ್ಸ್ಕಿ, ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವದ ನಾಯಕ ಮಾಸ್ಕೋದಲ್ಲಿ ವಿಶ್ವದ ಅತ್ಯಂತ ರಕ್ತಸಿಕ್ತ ಅಪರಾಧಿಯನ್ನು ಅಪ್ಪಿಕೊಳ್ಳುವುದನ್ನು ನೋಡುವುದು ತುಂಬಾ ಬೇಸರವಾಗಿದೆ ಎಂದು ಹೇಳಿದ್ದಾರೆ.
ಪ್ರಸ್ತುತ ಎರಡು ದಿನಗಳ ಅಧಿಕೃತ ರಷ್ಯಾ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಎರಡು ವರ್ಷಗಳಿಂದ ನಡೆಯುತ್ತಿರುವ ಉಕ್ರೇನ್ ಯುದ್ಧವನ್ನು ಕೊನೆಗೊಳಿಸುವಂತೆ ನೇರ ಮನವಿ ಮಾಡಿದರು. ಮಾಸ್ಕೋದಲ್ಲಿ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರ ಅಧಿಕೃತ ನಿವಾಸದಲ್ಲಿ ಅನೌಪಚಾರಿಕ ಸಭೆಯ ಸಂದರ್ಭದಲ್ಲಿ, ಪ್ರಧಾನಿ ಮೋದಿ ಅವರಿಗೆ ಯುದ್ಧಭೂಮಿಯಲ್ಲಿ ಯಾವುದೇ ಪರಿಹಾರವನ್ನು ಕಂಡುಹಿಡಿಯಲಾಗುವುದಿಲ್ಲ ಎಂದು ಹೇಳಿದರು.
ಅಮೇರಿಕಾ ಕೊಲೆಗಡುಕನಲ್ಲವೇ.ರಷ್ಯಾ -ಉಕ್ರೇನ್ ಯುದ್ಧ ಅವರ ಆಂತರಿಕ ಸಮಸ್ಯೆ.ತಪ್ಪು-ಸರಿ ವಿಮರ್ಶೆ ವಿಶ್ವಸಂಸ್ಥೆಯ ಜವಾಬ್ದಾರಿ.ಹೊಳೆ/ನದಿ ಈಜಿ ದಾಟಲು ದೋಣಿ ನಾಯಕನ ಅಪ್ಪಣೆ ಹೇಳಬೇಕೇ..?