ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ರಾಜ್ಯ ಸರ್ಕಾರ ನಡೆಸುತ್ತಿರುವ ಸಾಧನಾ ಸಮಾವೇಶದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ರೈತರ ಸಮಸ್ಯೆಗಳು ಹೆಚ್ಚುತ್ತಿರುವ ಸಂದರ್ಭದಲ್ಲಿ ಸರ್ಕಾರ ಪ್ರಚಾರಕ್ಕೆ ಹೆಚ್ಚು ಒತ್ತು ನೀಡುತ್ತಿದೆ ಎಂದು ಆರೋಪಿಸಿದ ಅವರು, “ರೈತರ ಸಮಾಧಿ ಮೇಲೆ ಪ್ರದರ್ಶನ ನಡೆಯುತ್ತಿದೆ” ಎಂದು ಕಿಡಿಕಾರಿದರು.
ರೈತರ ಆತ್ಮಹತ್ಯೆ ವಿಚಾರ ಪ್ರಸ್ತಾಪ
ಬೆಂಗಳೂರಿನಲ್ಲಿ ಮಾತನಾಡಿದ ಕುಮಾರಸ್ವಾಮಿ, ಕಳೆದ ಎರಡು ವರ್ಷಗಳಲ್ಲಿ ಸಾವಿರಾರು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿದರು. ಎನ್‌ಸಿಆರ್‌ಬಿ ಅಂಕಿಅಂಶಗಳನ್ನು ಉಲ್ಲೇಖಿಸಿದ ಅವರು, ರೈತರ ಆತ್ಮಹತ್ಯೆ ಪ್ರಮಾಣದಲ್ಲಿ ಕರ್ನಾಟಕ ದೇಶದಲ್ಲೇ ಎರಡನೇ ಸ್ಥಾನದಲ್ಲಿದೆ ಎಂದು ಹೇಳಿದರು. ಈ ಪ್ರಕರಣಗಳನ್ನು ಸರ್ಕಾರ ಮುಚ್ಚಿಡಲು ಯತ್ನಿಸುತ್ತಿದೆ ಎಂದೂ ಟೀಕಿಸಿದರು.
ಇದನ್ನೂ ಓದಿ:
ಸಮಾವೇಶಕ್ಕೆ ಕೋಟ್ಯಂತರ ವೆಚ್ಚ ಆರೋಪ
ಸಾಧನಾ ಸಮಾವೇಶಕ್ಕಾಗಿ ಕೋಟ್ಯಂತರ ರೂಪಾಯಿ ಖರ್ಚು ಮಾಡಲಾಗುತ್ತಿದೆ ಎಂದು ಆರೋಪಿಸಿದ ಅವರು, ಜನರನ್ನು ಕರೆತರಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು. ಸರ್ಕಾರದ ಹಣ ಬಳಸಿ ಕಾರ್ಯಕ್ರಮ ಯಶಸ್ವಿಯಂತೆ ತೋರಿಸಲು ಪ್ರಯತ್ನ ನಡೆಯುತ್ತಿದೆ ಎಂದು ದೂರಿದರು.



