Thursday, March 23, 2023

Latest Posts

ಕಾಂಗ್ರೆಸ್‌ ಗೆ ಸೇರ್ಪಡೆಯಾದ ಸಾಧು ಕೋಕಿಲ: ಕೆಪಿಸಿಸಿ ಸಾಂಸ್ಕೃತಿಕ ಘಟಕದ ಅಧ್ಯಕ್ಷರಾಗಿ ನೇಮಕ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಕನ್ನಡ ಹಾಸ್ಯನಟ, ಸಂಗೀತ ನಿರ್ದೇಶಕ ಸಾಧು ಕೋಕಿಲ ಕಾಂಗ್ರೆಸ್‌ ಸೇರ್ಪಡೆ ಆಗಿದ್ದಾರೆ. ಇದೇ ವೇಳೆ ರಾಜ್ಯ ಕೆಪಿಸಿಸಿ ಸಾಂಸ್ಕೃತಿಕ ಘಟಕದ ಅಧ್ಯಕ್ಷರ ಜವಾಬ್ದಾರಿಯನ್ನೂ ಕೊಡಲಾಗಿದೆ.

ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿ (ಕೆಪಿಸಿಸಿ) ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಅವರು ಪಕ್ಷದ ಶಲ್ಯವನ್ನು ಹಾಕಿ ಹಾಗೂ ಹೂಗುಚ್ಛ ನೀಡಿ ಸಾಧುಕೋಕಿಲ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡಿದ್ದಾರೆ. ಇನ್ನು ಪಕ್ಷ ಸೇರ್ಪಡೆಯ ಬೆನ್ನಲ್ಲೇ ಕೆಪಿಸಿಸಿ ಸಾಂಸ್ಕೃತಿಕ ಘಟಕದ ಅಧ್ಯಕ್ಷರನ್ನಾಗಿ ಸಾಧು ಕೋಕಿಲ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣದ ಮೂಲಕ ಶುಭ ಕೋರಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಅವರು, ‘ಕನ್ನಡದ ಖ್ಯಾತ ಸಂಗೀತ ನಿರ್ದೇಶಕರಾದ ಶ್ರೀ ಸಾಧು ಕೋಕಿಲಾ ಅವರನ್ನು ಕೆಪಿಸಿಸಿ ಸಾಂಸ್ಕೃತಿಕ ಘಟಕದ ಅಧ್ಯಕ್ಷರನ್ನಾಗಿ ಅಧಿಕೃತವಾಗಿ ಇಂದು ನೇಮಕ ಮಾಡಿ ಶುಭ ಕೋರಿದೆ. ಸಂಗೀತ, ನಿರ್ದೇಶನ, ನಟನೆಯ ಮೂಲಕ ಕನ್ನಡ ನಾಡಿನ ಮನೆಮಾತಾಗಿರುವ ಸಾಧು ಕೋಕಿಲಾ ಅವರು ಕಾಂಗ್ರೆಸ್‌ಗೆ ಇನ್ನಷ್ಟು ಶಕ್ತಿ ತುಂಬುತ್ತಾರೆ ಎನ್ನುವ ವಿಶ್ವಾಸ ನನಗಿದೆ ಎಂದು ಬರೆದುಕೊಂಡಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!