January17, 2026
Saturday, January 17, 2026
spot_img

ವಕೀಲೆಯ ಮೇಲೆ ಅತ್ಯಾಚಾರ: ಎಸ್‌ಎಎಫ್ ಪೊಲೀಸ್ ಕಾನ್‌ಸ್ಟೆಬಲ್ ಬಂಧನ

ಬೆಂಗಳೂರು ನಗರದಲ್ಲಿ ವಕೀಲೆಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಎಸ್‌ಎಎಫ್‌ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸ್ ಕಾನ್‌ಸ್ಟೆಬಲ್‌ನ್ನು ಬಸವೇಶ್ವರನಗರ ಪೊಲೀಸರು ಬಂಧಿಸಿದ್ದಾರೆ. ಈ ಘಟನೆ ನಗರದ ಕಾನೂನು ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.

ಬಂಧಿತನನ್ನು ಸಿದ್ದೇಗೌಡ ಅಲಿಯಾಸ್ ಸಿದ್ದು ಎಂದು ಗುರುತಿಸಲಾಗಿದ್ದು, ಅವರು ಮಂಗಳೂರಿನ ಪಾಂಡೇಶ್ವರದಲ್ಲಿರುವ ಸ್ಪೆಷಲ್ ಆಕ್ಷನ್ ಫೋರ್ಸ್ ಘಟಕದಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ವಕೀಲೆಯೊಂದಿಗೆ ಮದುವೆಯಾಗುವುದಾಗಿ ನಂಬಿಸಿ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ. ಬಳಿಕ ಜಾತಿ ಕಾರಣವನ್ನು ಹೇಳಿ ಮದುವೆಗೆ ನಿರಾಕರಿಸಿದ್ದಾನೆ ಎಂದು ಆರೋಪಿಸಲಾಗಿದೆ.

ಪೀಡಿತ ವಕೀಲೆ ಈ ಕುರಿತು ಬಸವೇಶ್ವರನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ದೂರಿನ ಆಧಾರದ ಮೇಲೆ ಪೊಲೀಸರು ಎಫ್‌ಐಆರ್ ದಾಖಲಿಸಿ ತನಿಖೆ ಕೈಗೊಂಡು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಇದೀಗ ಪ್ರಕರಣವನ್ನು ಮುಂದುವರಿಸಿ ನ್ಯಾಯಾಂಗ ಕ್ರಮ ಕೈಗೊಳ್ಳಲಾಗುತ್ತಿದೆ.

Must Read

error: Content is protected !!