Monday, December 4, 2023

Latest Posts

ಟೀಂ ಇಂಡಿಯಾದ ಅಭ್ಯಾಸ ಜೆರ್ಸಿಗಳಲ್ಲಿ ಕೇಸರಿ ಬಣ್ಣ: ಮೋದಿ ಸರಕಾರ ವಿರುದ್ದ ಮಮತಾ ಬ್ಯಾನರ್ಜಿ ಆಕ್ರೋಶ!

ಹೊಸದಿಗಂತ ಡಿಜಿಟಲ್ ಡೆಸ್ಕ್

ಟೀಂ ಇಂಡಿಯಾದ ಪ್ರ್ಯಾಕ್ಟೀಸ್ ಜೆರ್ಸಿಯಲ್ಲಿ ಇರುವ ಕೇಸರಿ ಬಣ್ಣವನ್ನು ಪಶ್ಚಿಮ ಬಂಗಾಳ (West Bengal) ಸಿಎಂ ಮಮತಾ ಬ್ಯಾನರ್ಜಿ ಕಟುವಾಗಿ ವಿರೋಧಿಸಿದ್ದಾರೆ.

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಅವರು, ಟೀಂ ಇಂಡಿಯಾದ (Team India Jersy) ಅಭ್ಯಾಸ ಜೆರ್ಸಿಗಳಲ್ಲಿ ಕೇಸರಿ ಬಣ್ಣ ಅಲ್ಲದೇ ಮೆಟ್ರೋ ಸ್ಟೇಷನ್‍ಗಳ ಗೋಡೆಗಳಿಗೂ ಕೇಸರಿ ಬಣ್ಣವನ್ನು ಬಳಿಯಲಾಗುತ್ತಿದೆ. ಈ ಮೂಲಕ ಕೇಂದ್ರ ಸರ್ಕಾರವು ಹಲವು ಸಂಸ್ಥೆಗಳನ್ನು ಕೇಸರೀಕರಣಗೊಳಿಸುತ್ತಿದೆ ಎಂದು ಅವರು ಗಂಭೀರ ಆರೋಪ ಮಾಡಿದ್ದಾರೆ.

ಈ ಹಿಂದೆ ಅವರು ನೀಲಿ ಬಣ್ಣದ ಜೆರ್ಸಿ ಧರಿಸುತ್ತಿದ್ದರು. ಆದರೆ ಇದೀಗ ಬಿಜೆಪಿಯವರು (BJP) ಇಡೀ ದೇಶಕ್ಕೆ ಕೇಸರಿ ಬಣ್ಣ ಬಳಿಯಲು ಪ್ರಯತ್ನಿಸುತ್ತಿದ್ದಾರೆ. ನಮ್ಮ ಭಾರತೀಯ ಆಟಗಾರರ ಮೇಲೆ ನಮಗೆ ಹೆಮ್ಮೆ, ಅಭಿಮಾನ ಹೊಂದಿದ್ದೇವೆ. ವಿಶ್ವಕಪ್ ನಲ್ಲಿ ಗೆಲ್ಲುತ್ತಾರೆಂದು ನಂಬುತ್ತೇನೆ. ಆದರೆ ನಮ್ಮ ಆಟಗಾರರು ಈಗ ಕೇಸರಿ ಬಣ್ಣದ ಜೆರ್ಸಿ ಹಾಕಿ ಆಡಬೇಕಿದೆ. ಇತ್ತ ಮೆಟ್ರೋ ಸ್ಟೇಷನ್‍ಗಳಿಗೂ ಕೇಸರಿ ಬಳಿಯಲಾಗಿದೆ. ಇದನ್ನು ಒಪ್ಪಲು ಸಾಧ್ಯವಿಲ್ಲ ಎಂದು ಅಸಮಾಧಾನ ಹೊರಹಾಕಿದ್ದಾರೆ.

ಭಾರತ ದೇಶವು ಇಲ್ಲಿನ ಜನರಿಗೆ ಸೇರಿದ್ದಾಗಿದೆ ಹೊರತು ಕೇವಲ ಬಿಜೆಪಿಯವರಿಗೆ ಸೇರಿದ್ದಲ್ಲ. ಅಧಿಕಾರ ನಿಂತ ನೀರಲ್ಲ, ಬರುತ್ತದೆ ಹೋಗುತ್ತದೆ. ಆದರೆ ಇಂತಹದ್ದೆಲ್ಲಾ ಯಾವ ಕಾರಣಕ್ಕೂ ಫಲ ನೀಡುವುದಿಲ್ಲ ಎಂದು ದೀದಿ ಗುಡುಗಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!