ಹಲ್ಲೆ ಖಂಡಿಸಿ ಸಾಗರ ಬಂದ್ ಬಹುತೇಕ ಯಶಸ್ವಿ!

ಹೊಸದಿಗಂತ ವರದಿ,ಶಿವಮೊಗ್ಗ:

ಸಾಗರ ನಗರದ ಬಿ.ಎಚ್. ರಸ್ತೆಯ ಖಾಸಗಿ ಬಸ್ ನಿಲ್ದಾಣ ಸಮೀಪ ಬಜರಂಗ ದಳದ ನಗರ ಸಹ ಸಂಚಾಲಕ ಸುನೀಲ್ ಮೇಲೆ ಸಮೀರ್ ಎಂಬಾತ ತಲ್ವಾರ್‌ನಿಂದ ಹಲ್ಲೆಗೆ ಯತ್ನ ನಡೆಸಿದ ಘಟನೆ ಹಿನ್ನೆಲೆಯಲ್ಲಿ ವಿಶ್ವ ಹಿಂದೂ ಪರಿಷತ್, ಬಜರಂಗದಳ ಮತ್ತು ಪರಿವಾರದ ಸಂಘಟನೆಗಳು ಮಂಗಳವಾರ ನೀಡಿದ್ದ ಸಾಗರ್ ಬಂದ್ ಬಹುತೇಕ ಯಶಸ್ವಿಗೊಂಡಿದೆ.

ಸರ್ಕಾರಿ ಕಚೇರಿ, ಬ್ಯಾಂಕ್, ಅಂಚೆ ಕಚೇರಿ ಹೊರತುಪಡಿಸಿ ಶಾಲಾ-ಕಾಲೇಜುಗಳು ಬಹುತೇಕ ಬಂದ್ ಆಗಿದ್ದು ಕಂಡು ಬಂದಿತ್ತು. ನಗರ ವ್ಯಾಪ್ತಿಯಲ್ಲಿ ಅಂಗಡಿ ಮುಂಗಟ್ಟುಗಳು, ಹೋಟೆಲ್‌ಗಳು ಬಂದ್ ಆಗಿದ್ದವು. ಖಾಸಗಿ ಬಸ್ ಸಂಚಾರ ಸಹ ಇಲ್ಲದೆ ಇರುವುದರಿಂದ ಬಸ್ ನಿಲ್ದಾಣ ಬಿಕೋ ಎನ್ನುತಿತ್ತು. ಒಟ್ಟಾರೆ ಪರಿವಾರದ ಸಂಘಟನೆಗಳು ಮಂಗಳವಾರ ಸುನೀಲ್ ಮೇಲಿನ ಹಲ್ಲೆಯತ್ನ ಖಂಡಿಸಿ ಹಮ್ಮಿಕೊಳ್ಳಲಾಗಿದ್ದ ಸಾಗರ ಬಂದ್‌ಗೆ ಉತ್ತಮ ಪ್ರತಿಕ್ರಿಯೆ ದೊರೆತಿದೆ.

ಸುನೀಲ್ ಮೇಲಿನ ಹಲ್ಲೆ ಖಂಡಿಸಿ, ಆರೋಪಿ ಸಮೀರ್ ಮತ್ತಿತರರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಒತ್ತಾಯಿಸಿ ವಿಶ್ವಹಿಂದೂ ಪರಿಷತ್, ಬಜರಂಗದಳ ಮತ್ತು ಪರಿವಾರದ ಇತರೆ ಸಂಘಟನೆಗಳ ಆಶ್ರಯದಲ್ಲಿ ಬೃಹತ್ ಮೆರವಣಿಗೆ ನಡೆಸಲಾಯಿತು. ಮಹಾಗಣಪತಿ ದೇವಸ್ಥಾನದಿಂದ ಹೊರಟ ಮೆರವಣಿಗೆಯು ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಸುನೀಲ್ ಮನೆ ಇರುವ ಹಾನಂಬಿ ರಸ್ತೆಯಲ್ಲಿ ಸಹ ಮೆರವಣಿಗೆ ನಡೆದದ್ದು ವಿಶೇಷವಾಗಿತ್ತು. ಮೆರವಣಿಗೆಯಲ್ಲಿ ಸಾವಿರಾರು ಜನರು ಪಾಲ್ಗೊಂಡಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!