ಬಹುಕಾಲದ ಗೆಳತಿ ಜೊತೆ ನಿಶ್ಚಿತಾರ್ಥ ಮಾಡಿಕೊಂಡ ‘ಸತ್ಯ’ ಧಾರಾವಾಹಿ ಖ್ಯಾತಿಯ ಸಾಗರ್!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕಿರುತೆರೆಯ `ಸತ್ಯ’ ಸೀರಿಯಲ್ ಹೀರೋ ಸಾಗರ್ ಇಂದು ಬಹುಕಾಲದ ಗೆಳತಿ ಸಿರಿ ರಾಜು ಜೊತೆ ನಿಶ್ವಿತಾರ್ಥ ಮಾಡಿಕೊಂಡಿದ್ದಾರೆ.

`ಸತ್ಯ’ ಧಾರಾವಾಹಿಯಲ್ಲಿ ಕಾರ್ತಿಕ್ ಪಾತ್ರಧಾರಿಯಾಗಿ ಅಪಾರ ಅಭಿಮಾನಿಗಳ ಮನಗೆದ್ದ ನಟ ಸಾಗರ್ ಗೌಡ ಇದೀಗ ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ. ಅಮುಲ್ ಬೇಬಿ ಎಂದೇ ಫೇಮಸ್ ಆಗಿದ್ದ ನಟ ಇದೀಗ ನಟಿ, ಕಮ್ ಮಾಡೆಲ್ ಸಿರಿ ರಾಜು ಅವರನ್ನು ಮದುವೆಯಾಗುತ್ತಿದ್ದಾರೆ.

ಐದು ವರ್ಷಗಳಿಂದ ಸ್ನೇಹಿತರಾಗಿದ್ದ ಈ ಜೋಡಿ ಇಂದು ನಿಶ್ವಿತಾರ್ಥ ಮಾಡಿಕೊಂಡಿದ್ದಾರೆ. ಸದ್ಯ ಏಂಗೇಜ್‌ಮೆಂಟ್ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಿದೆ.

ಇನ್ನೂ ಸಿರಿ ರಾಜು ಕೂಡ ಕೆಲವು ಧಾರಾವಾಹಿಗಳಲ್ಲಿ ನಟಿಸಿದ್ದಾರೆ. ಮಾಡೆಲ್ ಆಗಿಯೂ ಗುರುತಿಸಿಕೊಂಡಿದ್ದಾರೆ. ಸದ್ಯ ವಿಜಯ್ ರಾಘವೇಂದ್ರ ಅಭಿನಯದ ಹೊಸ ಚಿತ್ರದಲ್ಲಿ ಸಿರಿ ಕೂಡ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!