ಸಾಗರ ಕ್ಷೇತ್ರದ ಮಾಜಿ ಶಾಸಕ ಎಲ್.ಟಿ.ತಿಮ್ಮಪ್ಪ ಹೆಗಡೆ ನಿಧನ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಸಾಗರ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ, ಸಾಗರದ ಸಹಕಾರಿ ಧುರೀಣ ಎಲ್​.ಟಿ. ತಿಮ್ಮಪ್ಪ ಹೆಗಡೆ[94] ಇಂದು ನಿಧನರಾಗಿದ್ದಾರೆ.

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಹೆಗಡೆಯವರು ಸಾಗರ ತಾಲೂಕಿನ ಲಿಂಗದಹಳ್ಳಿ ಬಳಿಯ ಮಡಸೂರು ಗ್ರಾಮದಲ್ಲಿ ಇಂದು ಬೆಳಿಗ್ಗೆ ಕೊನೆಯುಸಿರೆಳೆದಿದ್ದಾರೆ.

ಹೆಗಡೆಯವರು 1978 ಹಾಗೂ 1983ರ ಚುನಾವಣೆಯಲ್ಲಿ ಸಾಗರ ಕ್ಷೇತ್ರದಿಂದ ಗೆದ್ದು ಶಾಸಕರಾಗಿದ್ದರು. 1978 ರಲ್ಲಿ ಜನತಾ ಪಕ್ಷದಿಂದ ಸ್ಫರ್ಧಿಸಿದ್ದ ಕಾಗೋಡು ತಿಮ್ಮಪ್ಪ ವಿರುದ್ಧ ಕಾಂಗ್ರೆಸ್​ನಿಂದ ಸ್ಫರ್ಧಿಸಿ ತಿಮ್ಮಪ್ಪ ಹೆಗಡೆ ಅವರು ಗೆದ್ದು ಬೀಗಿದ್ದರು. ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದ ತಿಮ್ಮಪ್ಪ ಅವರ ಸ್ವಗ್ರಾಮದಲ್ಲಿ ಇಂದು ಅಂತ್ಯಕ್ರಿಯೆ ನಡೆಯಲಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!