ಹಿರಿಯ ಸಾಹಿತಿ ಬರಗೂರು ರಾಮಚಂದ್ರಪ್ಪ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಹಿರಿಯ ಸಾಹಿತಿ ‘ಬರಗೂರು ರಾಮಚಂದ್ರಪ್ಪ’ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಸ್ಥಳೀಯ ಅಕ್ಷಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ತಿಳಿದು ಬಂದಿದೆ.
ದಾವಣಗೆರೆ ಜಿಲ್ಲೆಯ ಹರಿಹರ ಗ್ರಾಮದಲ್ಲಿ ನಡೆಯುತ್ತಿದ್ದ ಕಾರ್ಯಕ್ರಮವೊಂದರಲ್ಲಿ ಭಾಷಣ ಮಾಡುತ್ತಿದ್ದ ವೇಳೆ ಧಿಡೀರ್ ಆಗಿ ಕುಸಿದು ಬಿದ್ದಿದ್ದರು.

ರಕ್ತದೊತ್ತಡ ಹೆಚ್ಚಾದ ಹಿನ್ನೆಲೆ ಕುಸಿದು ಬಿದ್ದಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯ, ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದು, ಯಾವುದೇ ಅಪಾಯವಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!