Thursday, June 1, 2023

Latest Posts

ಸಾಹಿತಿ ಶ್ರೀನಿವಾಸ ವೈದ್ಯ ನಿಧನ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಸಾಹಿತಿ ಶ್ರೀನಿವಾಸ ವೈದ್ಯ ಅನಾರೋಗ್ಯದಿಂದ ಇಂದು ನಿಧನರಾಗಿದ್ದಾರೆ.

87 ವರ್ಷದ ವೈದ್ಯ ಅವರು ಅನಾರೋಗ್ಯದಿಂದ ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ. ಮೂಲತಃ ಧಾರವಾಡ ಜಿಲ್ಲೆಯ ನವಲಗುಂದದವರಾದ ವೈದ್ಯ ಅವರು ಬ್ಯಾಂಕಿಂಗ್ ಕ್ಷೇತ್ರದಲ್ಲಿ ಕೆಲಸ ಮಾಡುತ್ತಲೇ ಸಾಹಿತ್ಯ ಕ್ಷೇತ್ರದಲ್ಲಿಯೂ ತೊಡಗಿಸಿಕೊಂಡಿದ್ದರು.

ಲಲಿತ ಪ್ರಬಂಧಗಳು, ಕಾದಂಬರಿಗಳು ಹಾಗೂ ಸಾಕಷ್ಟು ಕಥಾ ಸಂಕಲನಗಳನ್ನು ಅವರು ಬರೆದಿದ್ದಾರೆ. ವೈದ್ಯ ಅವರ ಹಳ್ಳ ಬಂತು ಹಳ್ಳ ಕಾದಂಬರಿಗೆ 2004ರಲ್ಲಿ ರಾಜ್ಯ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಹಾಗೂ 2008 ರಲ್ಲಿ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ದೊರಕಿತ್ತು. 2010ರಲ್ಲಿ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದ ವೈದ್ಯ ಅವರು ಸಂವಾದ ಟ್ರಸ್ಟ್ ಸ್ಥಾಪಕರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!