Sunday, August 14, 2022

Latest Posts

ಸ್ವಾಗತಿಸಲು ಬಾರದ ಡಿಸಿ: ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷರಿಂದ ತರಾಟೆ

ಹೊಸದಿಗಂತ ವರದಿ, ಮಂಡ್ಯ:

ಸಫಾಯಿ ಕರ್ಮಚಾರಿ ಆಯೋಗದ ರಾಷ್ಟ್ರೀಯ ಮತ್ತು ರಾಜ್ಯ ಅಧ್ಯಕ್ಷರು ಜಿಲ್ಲಾಧಿಕಾರಿ ಕಚೇರಿಗೆ ಆಗಮಸಿದರೂ ಸ್ವಾಗತಿಸಲು ಜಿಲ್ಲಾಧಿಕಾರಿ ಬರಲಿಲ್ಲವೆಂಬ ಕಾರಣಕ್ಕೆ ಅವರನ್ನು ಅಧ್ಯಕ್ಷರುಗಳು ತರಾಟೆಗೆ ತೆಗೆದುಕೊಂಡ ಘಟನೆ ನಡೆಯಿತು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆಯುತ್ತಿದ್ದ ಸಭೆಗೆ ಆಗಮಿಸಿದ ಜಿಲ್ಲಾಧಿಕಾರಿ ಅಶ್ವಥಿ, ಅಧ್ಯಕ್ಷರಿಗೆ ಹೂಗುಚ್ಚ ನೀಡಲು ಮುಂದಾದರು. ಹೂಗುಚ್ಚ ಸ್ವೀಕರಿಸದ ರಾಷ್ಟ್ರೀಯ ಅಧ್ಯಕ್ಷ ಎಂ. ವೆಂಕಟೇಶ್ ಜಿಲ್ಲಾಧಿಕಾರಿಯನ್ನು ತರಾಟೆಗೆ ತೆಗೆದುಕೊಂಡು ಜಿಲ್ಲೆಯಲ್ಲಿ ಪ್ರವಾಸದ ಬಗ್ಗೆ ಮಾಹಿತಿ ತಲುಪಿಸಿ, ಕಚೇರಿಗೆ ಆಗಮಿಸಿದರೂ ಸ್ವಾಗತಿಸಲು ಬರದೆ ಸಭೆಗೂ ತಡವಾಗಿ ಬಂದಿದ್ದೀರಿ ಎಂದು ಕಿಡಿಕಾರಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss