CINEMA| ಶಾಕಿಂಗ್ ನಿರ್ಧಾರ ತೆಗೆದುಕೊಂಡ ನಟಿ ಸಾಯಿ ಪಲ್ಲವಿ…ನಿಜಾನಾ?

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ನಟಿ ಸಾಯಿ ಪಲ್ಲವಿ ತುಂಬಾ ನಿಧಾನವಾಗಿ ಸಿನಿಮಾಗಳನ್ನು ಆಯ್ಕೆ ಮಾಡಿಕೊಳ್ಳುತ್ತಿದ್ದಾರೆ. ಈ ಹಿಂದೆ ಲವ್ ಸ್ಟೋರಿ, ವಿರಾಟಪರ್ವಂ ಮತ್ತು ಗಾರ್ಗಿಯಂತಹ ಬ್ಯಾಕ್ ಟು ಬ್ಯಾಕ್ ಚಿತ್ರಗಳಲ್ಲಿ ನಟಿಸಿದ್ದ ಸಾಯಿ ಪಲ್ಲವಿ ಈಗ ಒಂದೇ ಒಂದು ಚಿತ್ರಕ್ಕೂ ಸಹಿ ಹಾಕಿಲ್ಲ. ಆಕೆಯ ಚಿತ್ರಕ್ಕಾಗಿ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ.

ಇತ್ತೀಚೆಗಷ್ಟೇ ಸಾಯಿ ಪಲ್ಲವಿ ಸಿನಿಮಾ ತೊರೆಯಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಆದರೆ, ಈ ಸುದ್ದಿಯ ಬಗ್ಗೆ ಯಾವುದೇ ಅಧಿಕೃತ ಹೇಳಿಕೆ ಬಂದಿಲ್ಲ. ಈ ನಡುವೆ ಸಾಯಿ ಪಲ್ಲವಿ ಇತ್ತೀಚೆಗಷ್ಟೇ ವೆಬ್ ಸೀರಿಸ್‌ನಲ್ಲಿ ನಟಿಸಲು ಹಸಿರು ನಿಶಾನೆ ತೋರಿದ್ದಾರೆ ಎನ್ನಲಾಗುತ್ತಿದೆ. ಫೀಲ್ ಗುಡ್ ಚಿತ್ರಗಳ ನಿರ್ದೇಶಕ ಶೇಖರ್ ಕಮ್ಮುಲ ನಿರ್ದೇಶನ ಮಾಡಲಿರುವ ಈ ವೆಬ್ ಸೀರಿಸ್ ನಲ್ಲಿ ಸಾಯಿ ಪಲ್ಲವಿ ನಟಿಸಲು ಒಪ್ಪಿಕೊಂಡಿದ್ದಾರೆ.

ಈ ಕುರಿತು ಕೂಡ ಯಾವುದೇ ಅಧಿಕೃತ ಪ್ರಕಟಣೆ ಹೊರಬೀಳದ ಕಾರಣ ಸಾಯಿ ಪಲ್ಲವಿ ನಿಜಕ್ಕೂ ಈ ಮಟ್ಟಿಗೆ ನಿರ್ಧಾರ ತೆಗೆದುಕೊಂಡಿದ್ದಾರಾ ಎಂಬ ಕುತೂಹಲ ಅಭಿಮಾನಿಗಳಲ್ಲಿ ಮೂಡಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!