CINEMA| ಪುಷ್ಪ-2 ಚಿತ್ರದಲ್ಲಿ ಸಾಯಿ ಪಲ್ಲವಿ: ಕ್ಲಾರಿಟಿ ಕೊಟ್ಟ ಲೇಡಿ ಪವರ್ ಸ್ಟಾರ್!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಸಾಯಿ ಪಲ್ಲವಿ ಪ್ರಸ್ತುತ ತುಂಬಾ ಆಯ್ದ ಚಿತ್ರಗಳನ್ನು ಮಾಡುತ್ತಾ ಪ್ರೇಕ್ಷಕರನ್ನು ಮೆಚ್ಚಿಸುತ್ತಿದ್ದಾರೆ. ಅಭಿನಯಕ್ಕೆ ಹೆಚ್ಚು ಸ್ಕೋಪ್ ಇರುವ ಪಾತ್ರಗಳನ್ನು ಆಯ್ಕೆ ಮಾಡಿಕೊಳ್ಳುತ್ತಲೇ ತಮ್ಮ ನಟನೆಯಿಂದ ಪ್ರೇಕ್ಷಕರನ್ನು ಮಂತ್ರಮುಗ್ಧರನ್ನಾಗಿಸುತ್ತಿದ್ದಾರೆ ಈ ಚೆಲುವೆ. ಸಾಯಿ ಪಲ್ಲವಿ ಅವರ ಇತ್ತೀಚಿನ ಚಿತ್ರಗಳಾದ ‘ವಿರಾಟಪರ್ವಂ’ ಮತ್ತು ‘ಗಾರ್ಗಿ’ಯಲ್ಲಿನ ಅವರ ಅಭಿನಯಕ್ಕೆ ಪ್ರೇಕ್ಷಕರು ಮಂತ್ರಮುಗ್ಧರಾಗಿದ್ದರು. ಇದೀಗ ಈ ಚೆಲುವೆ ತನ್ನ ಮುಂದಿನ ಸಿನಿಮಾದಲ್ಲಿ ಕೆಲಸ ಮಾಡುತ್ತಿದ್ದಾರೆ.

ಸ್ಟೈಲಿಶ್ ಸ್ಟಾರ್ ಅಲ್ಲು ಅರ್ಜುನ್ ಅಭಿನಯದ ಪ್ಯಾನ್ ಇಂಡಿಯಾ ಸಿನಿಮಾ ‘ಪುಷ್ಪಾ-2’ ನಲ್ಲಿ ಸಾಯಿ ಪಲ್ಲವಿ ನಟಿಸಲಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಹಲವು ವರದಿಗಳು ಬಂದಿವೆ. ಇತ್ತೀಚೆಗೆ ಸಂದರ್ಶನವೊಂದರಲ್ಲಿ ಮಾತನಾಡಿರುವ ಸಾಯಿ ಪಲ್ಲವಿ ಈ ಸುದ್ದಿಗೆ ಪ್ರತಿಕ್ರಿಯಿಸಿದ್ದಾರೆ. ಪುಷ್ಪ-2 ಸಿನಿಮಾದಲ್ಲಿ ನಟಿಸುತ್ತಿಲ್ಲ…ಈ ಸಿನಿಮಾದಿಂದ ತನಗೆ ಯಾವುದೇ ಆಫರ್ ಬಂದಿಲ್ಲ ಎಂದಿದ್ದಾರೆ.

ಆದರೆ ಪುಷ್ಪ-2 ಚಿತ್ರದಲ್ಲಿ ನಟಿಸುತ್ತಿರುವ ಸುದ್ದಿ ಓಡಾಡುತ್ತಿರುವುದು ನನಗೆ ತುಂಬಾ ಖುಷಿ ನೀಡಿದೆ ಎಂದು ಸಾಯಿ ಪಲ್ಲವಿ ಹೇಳಿದ್ದಾರೆ. ಈಗ ಅವರು ತಮ್ಮ ಮುಂದಿನ ಸಿನಿಮಾವನ್ನು ತಮಿಳು ಹೀರೋ ಶಿವಕಾರ್ತಿಕೇಯನ್ ಜೊತೆ ಮಾಡುತ್ತಿದ್ದಾರೆ. ಸದ್ಯದಲ್ಲೇ ಈ ಚಿತ್ರದ ಬಗ್ಗೆ ಹೆಚ್ಚಿನ ಮಾಹಿತಿಗಳನ್ನು ಚಿತ್ರತಂಡ ಬಹಿರಂಗಪಡಿಸಲಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!