ಪಂಜಾಬ್‌ ವಾತಾವರಣ ಹಾಳು ಮಾಡುವವರನ್ನು ಬಿಡುವುದಿಲ್ಲ: ಭಗವಂತ್‌ ಮಾನ್

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಮೊಹಾಲಿ ಸ್ಫೋಟಕ್ಕೆ ಕಾರಣರಾದ ಯಾರನ್ನೂ ಬಿಡುವುದಿಲ್ಲ, ರಾಜ್ಯದ ವಾತಾವರಣವನ್ನು ಹಾಳು ಮಾಡಲು ಪ್ರಯತ್ನಿಸುವವರಿಗೆ ತಕ್ಕ ಶಿಕ್ಷೆ ನೀಡುತ್ತೇವೆ ಎಂದು ಪಂಜಾಬ್‌ ಮುಖ್ಯಮಂತ್ರಿ ಭಗವಂತ್ ಮಾನ್ ಹೇಳಿದ್ದಾರೆ. ಮಾನ್ ಅವರು ಇಂದು ತಮ್ಮ ನಿವಾಸದಲ್ಲಿ ಡಿಜಿಪಿ ಮತ್ತು ಇತರ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಇಲ್ಲಿಯವರೆಗೆ ತೆಗೆದುಕೊಂಡ ಕ್ರಮಗಳ ಬಗ್ಗೆ ವರದಿಯನ್ನು ಕೇಳಿದ್ದಾರೆ.

ಮೊಹಾಲಿಯಲ್ಲಿ ನಡೆದ ಸ್ಫೋಟದ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಪಂಜಾಬ್‌ನ ವಾತಾವರಣವನ್ನು ಹಾಳು ಮಾಡಲು ಯಾರು ಪ್ರಯತ್ನಿಸಿದರೂ ಅವರನ್ನು ಬಿಡಲಾಗುವುದಿಲ್ಲ ಎಂದು ಮಾನ್ ಇಂದು ಟ್ವಿಟರ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. ಸೋಮವಾರ ರಾತ್ರಿ, ಮೊಹಾಲಿಯಲ್ಲಿರುವ ಪಂಜಾಬ್ ಪೊಲೀಸ್ ಇಂಟೆಲಿಜೆನ್ಸ್ ಪ್ರಧಾನ ಕಛೇರಿಯ ಹೊರಗೆ ಸಣ್ಣ ಸ್ಫೋಟ ಸಂಭವಿಸಿದೆ. ಘಟನೆಯಲ್ಲಿ ಭಯೋತ್ಪಾದನೆಯ ಕೈವಾಡವನ್ನು ತಳ್ಳಿಹಾಕಲಾಗುವುದಿಲ್ಲ. ಹಿರಿಯ ಅಧಿಕಾರಿಗಳು ಸ್ಥಳದಲ್ಲಿ ಮೊಕ್ಕಾಂ ಹೂಡಿದ್ದು, ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ. ಸ್ಥಳದಲ್ಲಿ ಮತ್ತಷ್ಟು ಬಿಗಿ ಪೊಲೀಸ್‌ ಬಂದೋಬಸ್ತ್‌ ವ್ಯವಸ್ಥೆ ಮಾಡಲಾಗಿದೆ ಎಂದು ಮೊಹಾಲಿ ಪೊಲೀಸರು ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!