ಹೊಸದಿಗಂತ ಡಿಜಿಟಲ್ ಡೆಸ್ಕ್:
ಸೈಫ್ ಅಲಿ ಖಾನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಬೆಳ್ಳಂಬೆಳಿಗ್ಗೆ ಆರೋಪಿಯೊಬ್ಬನನ್ನು ಬಂಧಿಸಿದ್ದಾರೆ. ಹೋಟೆಲ್ ಒಂದರಲ್ಲಿ ವೇಯಿಟರ್ ಆಗಿ ಕೆಲಸ ಮಾಡುತ್ತಿದ್ದ ವಿಜಯ್ ದಾಸ್ ಹೆಸರಿನ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.
ಈತ ಸೈಫ್ ಅಲಿ ಖಾನ್ ಮೇಲೆ ದಾಳಿ ಮಾಡಿದ ವ್ಯಕ್ತಿ ಅಲ್ಲ ಎನ್ನಲಾಗುತ್ತಿದೆ. ಆದರೆ ದಾಳಿ ಕೋರನಿಗೆ ಸಹಾಯ ಮಾಡಿದ ಹಾಗೂ ದಾಳಿಕೋರನ ಜೊತೆಗೆ ಸಂಪರ್ಕದಲ್ಲಿ ಇದ್ದ ವ್ಯಕ್ತಿ ಎನ್ನಲಾಗಿದೆ.
ಸೈಫ್ ಅಲಿ ಖಾನ್ ಮನೆಯಿಂದ 35 ಕಿ.ಮೀ ದೂರದಲ್ಲಿರುವ ಕಾಸರ್ವಾದಲಿಯ ಹೀರಾನಂದಾನಿ ಎಸ್ಟೇಟ್ ಬಳಿಯಲ್ಲಿ ಆರೋಪಿ ವಿಜಯ್ ದಾಸ್ ಅನ್ನು ಬಂಧಿಸಲಾಗಿದೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಛತ್ತೀಸ್ಘಡದ ರೈಲ್ವೆ ನಿಲ್ದಾಣದಲ್ಲಿ ಆಕಾಶ ಕೈಲಾಶ್ ಕನ್ನೋಜಿಯಾ ಹೆಸರಿನ ಆರೋಪಿಯನ್ನು ಸಹ ಬಂಧಿಸಲಾಗಿದೆ.