ಹೊಸದಿಗಂತ ಡಿಜಿಟಲ್ ಡೆಸ್ಕ್:
ಸೈಫ್ ಅಲಿ ಖಾನ್ ಮನೆಗೆ ನುಗ್ಗಿ ಹಣಕ್ಕಾಗಿ ಬೇಡಿಕೆ ಇಟ್ಟಿದ್ದ ಕಳ್ಳನನ್ನು ಘಟನೆ ನಡೆದ ಸುಮಾರು 30 ಗಂಟೆಗಳ ಬಳಿಕ ಮುಂಬೈ ಪೊಲೀಸರು ಬಂಧಿಸಿದ್ದಾರೆ.
ಸದ್ಯ ಬಾಂದ್ರಾ ಪೊಲೀಸರು ಆರೋಪಿಯನ್ನು ಠಾಣೆಗೆ ಕರೆ ತಂದಿದ್ದಾರೆ. ಅಲ್ಲಿ ಆತನ ವಿಚಾರಣೆ ನಡೆಸಲಾಗುತ್ತಿದೆ. ದಾಳಿ ಮಾಡಿದರ ಹಿಂದಿನ ಉದ್ದೇಶ ಏನು? ಈ ದಾಳಿ ಹಿಂದೆ ಬೇರೆ ಯಾರದ್ದಾದರೂ ಕೈವಾಡ ಇದೆಯೇ ಎಂಬ ಬಗ್ಗೆ ವಿಚಾರಣೆ ನಡೆಸಲಾಗುತ್ತಿದೆ.
ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.