ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಾಲಿವುಡ್ ನಟ ಸೈಫ್ ಅಲಿ ಖಾನ್ಗೆ ಚೂರಿ ಇರಿದ ಘಟನೆಯ ಬಗ್ಗೆ ಮೆಗಾಸ್ಟಾರ್ ಚಿರಂಜೀವಿ ಮತ್ತು ಜೂನಿಯರ್ ಎನ್ಟಿಆರ್ ಪ್ರತಿಕ್ರಿಯಿಸಿದ್ದಾರೆ. ಸೈಫ್ ಮೇಲಿನ ದಾಳಿಯ ಬಗ್ಗೆ ತಿಳಿದು ಆಘಾತಕ್ಕೊಳಗಾಗಿದ್ದೇವೆ ಎಂದು ಚಿರಂಜೀವಿ, ತಾರಕ್ ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ಸೈಫ್ ಚಾಕು ಇರಿತದ ಬಗ್ಗೆ ಪ್ರತಿಕ್ರಿಯಿಸಿದ ಚಿರಂಜೀವಿ, “ಸೈಫ್ ಅಲಿ ಖಾನ್ ಮೇಲಿನ ದಾಳಿಯ ಬಗ್ಗೆ ಕೇಳಿ ನಾನು ವಿಚಲಿತನಾಗಿದ್ದೇನೆ. ಅವರು ಶೀಘ್ರವಾಗಿ ಚೇತರಿಸಿಕೊಳ್ಳಲು ಪ್ರಾರ್ಥಿಸುತ್ತೇನೆ” ಎಂದು ಬರೆದಿದ್ದಾರೆ.
ಇನ್ನೂ ಸೈಫ್ ಸರ್ ಮೇಲಿನ ದಾಳಿಯ ವಿಷ್ಯ ಕೇಳಿ ಆಘಾತ ಮತ್ತು ದುಃಖವಾಯಿತು. ಅವರು ಶೀಘ್ರವಾಗಿ ಚೇತರಿಕೊಳ್ಳಲು ಮತ್ತು ಉತ್ತಮ ಆರೋಗ್ಯಕ್ಕಾಗಿ ಹಾರೈಸುತ್ತೇನೆ ಮತ್ತು ಪ್ರಾರ್ಥಿಸುತ್ತೇನೆ ಎಂದು ತೆಲುಗಿನ ಸ್ಟಾರ್ ಜ್ಯೂ.ಎನ್ಟಿಆರ್ ಬರೆದುಕೊಂಡಿದ್ದಾರೆ.