ಹೊಸದಿಗಂತ ಡಿಜಿಟಲ್ ಡೆಸ್ಕ್:
ಸೈಫ್ ಅಲಿ ಖಾನ್ ಚಾಕು ಇರಿತ ಪ್ರಕರಣ ಹಲವು ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಈಗಾಗಲೇ ಪ್ರಕರಣದ ತನಿಖೆಗೆ ಏಳು ತಂಡಗಳನ್ನು ರಚಿಸಲಾಗಿದೆ. ಇದೀಗ ಸೈಫ್ ಅಲಿ ಖಾನ್ ಕೇಸ್‌ಗೆ ಎನ್‌ಕೌಂಟರ್ ಸ್ಪೆಷಲಿಸ್ಟ್ ದಯಾ ನಾಯಕ್ ಎಂಟ್ರಿ ಕೊಟ್ಟಿದ್ದಾರೆ.
ಮುಂಬೈ ಭೂಗತ ಲೋಕವನ್ನು ಯಮನಂತೆ ಕಾಡುತ್ತಿರುವ ಎನ್‌ಕೌಂಟರ್ ದಯಾನಾಯಕ್ ಸೈಫ್ ಅಲಿ ಖಾನ್ ಪ್ರಕರಣಕ್ಕೆ ಎಂಟ್ರಿ ನೀಡಿದ್ದಾರೆ. ಎನ್‌ಕೌಂಟರ್ ದಯಾನಾಯಕ್ ಅವರು ಇಂದು ಸೈಫ್ ಅಲಿ ಖಾನ್ ಅನ್ನು ದಾಖಲು ಮಾಡಿರುವ ಲೀಲಾವತಿ ಆಸ್ಪತ್ರೆ ಆವರಣದಲ್ಲಿ ಕಾಣಿಸಿಕೊಂಡಿದ್ದಾರೆ. ಅದಕ್ಕೂ ಮುಂಚೆ ಅವರು ಸೈಫ್ ಅಲಿ ಖಾನ್ ಅವರ ಬಾಂದ್ರಾದ ಮನೆಗೂ ಭೇಟಿ ನೀಡಿದ್ದರು. ಅಲ್ಲಿಯೂ ಸಹ ತನಿಖೆಯಲ್ಲಿ ಪಾಲ್ಗೊಂಡಿದ್ದರು.
ಜನವರಿ 16 ರಂದು ಹಲವು ಪೊಲೀಸ್ ಅಧಿಕಾರಿಗಳು ಸೈಫ್ ಅಲಿ ಖಾನ್ ಅವರ ಬಾಂದ್ರಾದ ಅಪಾರ್ಟ್ಮೆಂಟ್ಗೆ ಭೇಟಿ ನೀಡಿ ತನಿಖೆ ನಡೆಸಿದ್ದರು. ಈ ವೇಳೆ ಎನ್‌ಕೌಂಟರ್ ದಯಾನಾಯಕ್ ಸಹ ಆಗಮಿಸಿದ್ದರು. ಸೈಪ್ ಅಲಿ ಖಾನ್ ಪ್ರಕರಣದ ತನಿಖೆಗೆ ಮಾಡಲಾಗಿರುವ ಏಳು ತಂಡಗಳಲ್ಲಿ ಒಂದು ತಂಡದ ಜವಾಬ್ದಾರಿ ಎನ್‌ಕೌಂಟರ್ ದಯಾನಾಯಕ್ ಅವರು ವಹಿಸಿಕೊಂಡಿದ್ದಾರೆ ಎನ್ನಲಾಗುತ್ತಿದೆ.