ಹೊಸದಿಗಂತ ಡಿಜಿಟಲ್ ಡೆಸ್ಕ್:
ಚನ್ನಪಟ್ಟಣದಲ್ಲಿ ಯೋಗೇಶ್ವರ್ ಗೆಲುವು ಸಾಧಿಸಿದ್ದಾರೆ. ಯೋಗೇಶ್ವರ್ ಕೊನೆಯ ಕ್ಷಣದಲ್ಲಿ ಬಿಜೆಪಿಯಿಂದ ಕಾಂಗ್ರೆಸ್ ಗೆ ಬದಲಾದರೂ ಜನತೆ ಕೈಹಿಡಿದಿದ್ದಾರೆ.
ನಿಖಿಲ್ ಮೊದಲ 6 ಸುತ್ತಿನಲ್ಲಿ ಮುನ್ನಡೆ ಸಾಧಿಸಿದ್ದರು. ಆದರೆ ಚನ್ನಪಟ್ಟಣ ನಗರದ ಇವಿಎಂ ಓಪನ್ ಆಗುತ್ತಿದ್ದಂತೆ ಯೋಗೇಶ್ವರ್ ಅವರಿಗೆ ಭರ್ಜರಿ ಮುನ್ನಡೆ ಸಿಕ್ಕಿತ್ತು.
ಚುನಾವಣೆಗೆ 4 ತಿಂಗಳು ಮೊದಲೇ ಡಿಸಿಎಂ ಡಿಕೆ ಶಿವಕುಮಾರ್ ಜನತಾ ದರ್ಶನ ಆರಂಭಿಸಿದ್ದರು. ಕಳೆದ ಬಾರಿ ಯೋಗೇಶ್ವರ್‌ಗೆ ಮಿಸ್ ಆಗಿದ್ದ ಅಲ್ಪ ಸಂಖ್ಯಾತ ಮತಗಳು ಈ ಬಾರಿ ದೊಡ್ಡ ಮಟ್ಟದಲ್ಲಿ ಕಾಂಗ್ರೆಸ್ ಕೈ ಹಿಡಿದಿದೆ.