ಹೊಸದಿಗಂತ ಡಿಜಿಟಲ್ ಡೆಸ್ಕ್:
ನನ್ನನ್ನು ಕಾಂಗ್ರೆಸ್ ಸೇರುವಂತೆ ಮಾಡಿದ್ದು ಕುಮಾರಸ್ವಾಮಿ. ಹಾಗಾಗಿ ಬಿಜೆಪಿ ತೊರೆದು ಕಾಂಗ್ರೆಸ್ ಸೇರಬೇಕಾಯಿತು. ನಾನು ಹಿಂದೆ ಗೆದ್ದಿದ್ದು ಬಿಟ್ರೆ ಇಲ್ಲಿ ಕಾಂಗ್ರೆಸ್‌ಗೆ ಅಸ್ತಿತ್ವ ಇರಲಿಲ್ಲ. ಚನ್ನಪಟ್ಟಣ ಕಾಂಗ್ರೆಸ್ ಅಭ್ಯರ್ಥಿ ಯೋಗೇಶ್ವರ್ ಉಪಚುನಾವಣೆ ಫಲಿತಾಂಶಕ್ಕೂ ಮುನ್ನ ಅಚ್ಚರಿಯ ಹೇಳಿಕೆ ನೀಡಿದ್ದು, ಜಮೀರ್ ಹೇಳಿಕೆ ಒಂದು ಕಡೆ ಲಾಭ ಆದ್ರೆ, ಒಂದಷ್ಟು ನಷ್ಟ ಆಗಿದೆ ಎಂದು ಹೇಳಿದ್ದಾರೆ.
ಚನ್ನಪಟ್ಟಣದ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಕಾಂಗ್ರೆಸ್ ಅಭ್ಯರ್ಥಿ ಯೋಗೇಶ್ವರ್, ಪಕ್ಷದ ಕಾರ್ಯಕರ್ತರು ಹಾಗೂ ಕಾಂಗ್ರೆಸ್ ಮುಖಂಡರಿಗೆ ಕೃತಜ್ಞತೆ ಸಲ್ಲಿಸುತ್ತೇನೆ. ಈ ಚುನಾವಣೆಯಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ ಸೇರಿದಂತೆ ಹಲವು ಸಚಿವರು ನನ್ನ ಪರ ಕೆಲಸ ಮಾಡಿದ್ದಾರೆ.
ಹಲವು ಶಾಸಕರು ಜವಾಬ್ದಾರಿ ಹೊತ್ತು ಕೆಲಸ ಮಾಡಿದ್ದಾರೆ. ಡಿ.ಕೆ ಸುರೇಶ್ ವಿಶೇಷವಾಗಿ ಕೆಲಸ ಮಾಡಿದ್ದಾರೆ. ಇದು ನನ್ನ ರಾಜಕೀಯ ಜೀವನದ ಅತಿ ದೊಡ್ಡ ಚುನಾವಣೆ. ಇದು ಇಷ್ಟು ತೀವ್ರವಾಗಿರುತ್ತದೆ ಎಂದು ಭಾವಿಸಿರಲಿಲ್ಲ ಎಂದು ತಿಳಿಸಿದ್ದಾರೆ.
ದೈತ್ಯ ಶಕ್ತಿ, ಒಕ್ಕಲಿಗರ ಬೆಂಬಲ ಇರೋ ವಂಶದ ಕುಡಿ ನನ್ನ ವಿರುದ್ಧ ಸ್ಪರ್ಧೆ ಮಾಡಿದೆ. ಈವರೆಗೂ ನನ್ನ ಎಲ್ಲಾ ಚುನಾವಣೆಯಲ್ಲೂ 80 ರಿಂದ 90 ಸಾವಿರ ಮತಗಳ ಪಡೆಯುತ್ತಿದ್ದೆ. ಈಗ ಕಾಂಗ್ರೆಸ್ ಅಭ್ಯರ್ಥಿ ಆಗಿದ್ದೇನೆ. ಬಿಜೆಪಿ-ಜೆಡಿಎಸ್ ಎರಡರ ಮೈತ್ರಿ ಇಲ್ಲಿ ವರ್ಕ್ ಆಗಬಹುದು ಎಂದು ಕಳವಳ ವ್ಯಕ್ತಪಡಿಸಿದ್ದಾರೆ.