ಮುಂಬೈ ದಾಳಿ ಸಂಚು ಮಾಡಿದ ಉಗ್ರನಿಗೆ ಪಾಕಿಸ್ತಾನದ ಜೈಲಿನಲ್ಲಿ ವಿಷಪ್ರಾಶನ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಮುಂಬೈ ದಾಳಿಯ (Mumbai 26/11 Attacks) ಪ್ರಮುಖ ಸಂಚುಕೋರ, ಲಷ್ಕರ್‌ ತೊಯ್ಬಾ ಉಗ್ರ ಸಂಘಟನೆಯ ಪ್ರಮುಖ ಸದಸ್ಯ ಸಾಜಿದ್ ಮಿರ್ (Sajid Mir) ವಿಷ ಆಹಾರ ಸೇವಿಸಿದ್ದು, ಸದ್ಯ ವೆಂಟಿಲೇಟರ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ ಎಂದು ವರದಿಯಾಗಿದೆ.

ಭಯೋತ್ಪಾದನಾ ನಿಗ್ರಹ ನ್ಯಾಯಾಲಯವು ಶಿಕ್ಷೆ ವಿಧಿಸಿದ ನಂತರ ಮಿರ್ ಅವರನ್ನು ಕಳೆದ ವರ್ಷ ಜೂನ್ ನಿಂದ ಕೋಟ್ ಲಖ್ ಪತ್ ಜೈಲಿನಲ್ಲಿ ಇರಿಸಲಾಗಿದೆ. ಆತ ಜೈಲಿನೊಳಗೆ ವಿಷ ಸೇವಿಸಿದ್ದಾನೆ ಮತ್ತು ಅಂದಿನಿಂದ ವೆಂಟಿಲೇಟರ್‌ ನಲ್ಲಿದ್ದು, ಚಿಕಿತ್ಸೆ ಪಡೆಯುತ್ತಿದ್ದಾನೆ ಎಂದು ವರದಿ ಹೇಳಿದೆ.

ಕೆಲವು ತಿಂಗಳ ಹಿಂದಷ್ಟೇ ಸಾಜಿದ್​ನನ್ನು ಲಾಹೋರ್ ಜೈಲಿನಿಂದ ಡೇರಾ ಘಾಜಿ ಖಾನ್‌ ಜೈಲಿಗೆ ಸ್ಥಳಾಂತರ ಮಾಡಲಾಗಿತ್ತು. ಇದೀಗ ಆತ ವಿಷ ಆಹಾರ ಸೇವಿಸಿದ್ದಾನೆ. ಸ್ವತಃ ಆತನೇ ಈ ವಿಷ ಸೇವಿಸಿದ್ದಾನೋ ಅಥವಾ ಜೈಲಿನ ಸಿಬ್ಬಂದಿ ಆಹಾರದಲ್ಲಿ ವಿಷ ಬೆರೆಸಿದ್ದಾರೋ ಎಂಬ ಮಾಹಿತಿ ಲಭ್ಯವಾಗಿಲ್ಲ. ಆದರೆ ಜೈಲಿನಲ್ಲಿ ಅಡುಗೆ ಮಾಡುತ್ತಿದ್ದ ವ್ಯಕ್ತಿಯೊಬ್ಬ ನಾಪತ್ತೆಯಾಗಿದ್ದಾನೆ ಎಂದು ಹೇಳಲಾಗಿದೆ.

ಗಂಭೀರವಾಗಿ ಅಸ್ವಸ್ಥಗೊಂಡಿರುವ ಸಾಜಿದ್​ನನ್ನು ಪಾಕಿಸ್ತಾನ ಸೇನೆ ಏರ್‌ಲಿಫ್ಟ್‌ ಮಾಡಿ ಬಹವಾಲ್‌ಪುರದ ಸಿಎಂಎಚ್‌ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್‌ ಕಾಲೇಜಿಗೆ ರವಾನಿಸಿದೆ. ಅಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ ಎಂದು ತಿಳಿದುಬಂದಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!