ಫೆ.16 ರಂದು ರಾಜ್ಯಾದ್ಯಂತ ಶಾಖಾಹಾರಿ ಸಿನಿಮಾ ರಿಲೀಸ್

ಹೊಸದಿಗಂತ ವರದಿ,ಶಿವಮೊಗ್ಗ :

ರಂಗಾಯಣ ರಘು ಮುಖ್ಯ ಭೂಮಿಕೆಯಲ್ಲಿ ಕಾಣಿಸಿಕೊಂಡಿರುವ ಶಾಖಾಹಾರಿ ಸಿನಿಮಾ ಫೆ.16ರಂದು ರಾಜ್ಯಾದ್ಯಂತ ತೆರೆ ಕಾಣಲಿದೆ ಎಂದು ಚಿತ್ರದ ನಿರ್ದೇಶಕ ಸಂದೀಪ್ ಸುಂದರ್ ತಿಳಿಸಿದರು.

ನಗರದಲ್ಲಿ ಬುಧವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿ, ಶಾಖಾಹಾರಿ ಚಿತ್ರ ಈಗಾಗಲೇ ಸಿನೆಮಾ ಉದ್ಯಮದಲ್ಲಿ ಸಾಕಷ್ಟು ಭರವಸೆ ಮೂಡಿಸಿದೆ. ತೀರ್ಥಹಳ್ಳಿ ಸುತ್ತಮುತ್ತ ಚಿತ್ರೀಕರಣ ಮಾಡಿದ್ದು, ಮಲೆನಾಡಿನ ಸಾಕಷ್ಟು ಕಲಾವಿದರು ನಟಿಸಿದ್ದಾರೆ ಎಂದರು.
ರಂಗಾಯಣ ರಘು  ಮತ್ತು ಗೋಪಾಲಕೃಷ್ಣ ದೇಶಪಾಂಡೆಯಂತವರು ಚಿತ್ರದಲ್ಲಿ ನಟಿಸಿದ್ದಾರೆ. ಜೊತೆಗೆ ಸುಜಯ್ ಶಾಸ್ತ್ರಿ , ಪ್ರತಿಮಾ ನಾಯಕ್, ಹರಿಣಿ, ವಿನಯ್, ಶ್ರೀಹರ್ಷ ಭಟ್ಟ, ನಿಧಿ ಹೆಗಡೆ ಮುಂತಾದವರು ಅಭಿನಯಿಸಿದ್ದಾರೆ. ಕತೆಯೇ ಇದರ ನಾಯಕ. ಚಿತ್ರಕಥೆಯೇ ಚಿತ್ರದ ನಾಯಕಿ ಎಂದರು.

ನಿರ್ಮಾಪಕ ರಾಜೇಶ್ ಕೀಳಂಬಿ ಮಾತನಾಡಿ, ನನ್ನ ಜೊತೆಗೆ ರಂಜನಿ ಪ್ರಸನ್ನ ನಿರ್ಮಾಪಕರಾಗಿದ್ದಾರೆ. ಈ ಸಿನಿಮಾ ಮಾಡಿರುವುದೇ ಒಂದು ಅಸ್ಮರಣೀಯ ಕ್ಷಣವಾಗಿದೆ. ಸಿನಿಮಾ ವೀಕ್ಷಕನಾಗಿದ್ದ ನಾನು ಚಿತ್ರಕ್ಕೆ ಬಂಡವಾಳ ಹೂಡಿದ್ದೇನೆ  ಎಂದರು.
ನಟ ಗೋಪಾಲಕೃಷ್ಣ ದೇಶಪಾಂಡೆ ಮಾತನಾಡಿ,  ಚಿತ್ರ ಶಾಖಾಹಾರಿಯಾದರು ತಣ್ಣನೆಯ ಕೌರ್ಯ ಇದೆ. ಹೆಚ್ಚು ಜನರನ್ನು ತಲುಪುತ್ತದೆ, ಈ ಚಿತ್ರ ಗೆಲ್ಲುತ್ತದೆ ಎಂಬ ವಿಶ್ವಾಸ ಇದೆ ಎಂದರು.

ಪತ್ರಿಕಾಗೋಷ್ಟಿಯಲ್ಲಿ ನಿರ್ಮಾಪಕಿ ರಂಜನಿ ಸೇರಿದಂತೆ ಹಲವರಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!