ಬಾಕ್ಸ್​ಆಫೀಸ್​ನಲ್ಲಿ ಸಲಾರ್​ ಹವಾ: ಮೊದಲ ದಿನವೇ ಭರ್ಜರಿ ಕಲೆಕ್ಷನ್!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಯಂಗ್​ ರೆಬೆಲ್​​ ಸ್ಟಾರ್ ಪ್ರಭಾಸ್​ ನಟನೆಯ, ಪ್ರಶಾಂತ್​ ನೀಲ್​ ನಿರ್ದೇಶನದ ಬಹುನಿರೀಕ್ಷಿತ ಸಲಾರ್​ ಚಿತ್ರವಿಶ್ವದಾದ್ಯಂತ ಬಿಡುಗಡೆಯಾಗಿದ್ದು, ಭರ್ಜರಿ ಓಪನಿಂಗ್​ ಪಡೆದುಕೊಂಡಿದೆ.

ಬಿಡುಗಡೆಯಾದ ಮೊದಲ ದಿನವೇ ಹಲವು ದಾಖಲೆಗಳನ್ನು ಸಲಾರ್​ ಪುಡಿ ಮಾಡಿದ್ದು, ಮೊದಲ ದಿನವೇ 178.7 ಕೋಟಿ ಗಳಿಕೆ ಕಂಡಿದೆ.
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ಬರೆದುಕೊಂಡಿರುವ ನಟ ಪೃಥ್ವಿರಾಜ್​ ಸುಕುಮಾರನ್​, ದ ಮೋಸ್ಟ್​ ವೈಲೆಂಟ್​ ಮ್ಯಾನ್​ ಅನೌನ್ಸ್​​​ಡ್​​ ಹಿಸ್​ ಅರೈವಲ್,​ 2023ರಲ್ಲಿ ಜಾಗತಿಕ ಮಟ್ಟದಲ್ಲಿ ಭಾರತದ ಚಲನಚಿತ್ರಕ್ಕೆ ಇದು ದೊಡ್ಡಮಟ್ಟದ ಓಪನಿಂಗ್​ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

ಸಲಾರ್ ಬಿಡುಗಡೆಯಾದ ಮೊದಲ ದಿನ ವಿಶ್ವದಾದ್ಯಂತ 178.7 ಕೋಟಿ ರೂಪಾಯಿ ಗಳಿಕೆ ಕಂಡಿದೆ. ಭಾರತದ ಬಾಕ್ಸ್​ಆಫೀಸ್​ನಲ್ಲಿ ಅಂದಾಜು 95 ಕೋಟಿ ರೂಪಾಯಿ ಕಮಾಯಿ ಮಾಡಿದೆ ಎಂದು ಹೇಳಲಾಗುತ್ತಿದೆ.

ಇತ್ತ ಡಂಕಿಗೆ ಹೋಲಿಸಿದರೆ, ಸಲಾರ್​ ಮೊದಲ ದಿನದ ಕಲೆಕ್ಷನ್​​ನಲ್ಲಿ ಮುಂದಿದೆ. ದಕ್ಷಿಣ ಭಾರತದ ಸಿನಿಮಾವೊಂದು ಮತ್ತೊಮ್ಮೆ ಬಾಲಿವುಡ್ ಚಿತ್ರಕ್ಕೆ ಸೆಡ್ಡು ಹೊಡೆದು, ಬಾಕ್ಸ್ ಆಫೀಸಿನಲ್ಲಿ ಮುನ್ನುಗ್ಗುತ್ತಿರುವುದು ಎಲ್ಲರ ಹುಬ್ಬೇರಿಸಿದೆ.

ಪ್ರಶಾಂತ್ ನೀಲ್ ನಿರ್ದೇಶನದ ಈ ಚಿತ್ರದಲ್ಲಿ ಪ್ರಭಾಸ್, ಶ್ರುತಿ ಹಾಸನ್, ಪೃಥ್ವಿರಾಜ್​ ಸುಕುಮಾರನ್, ಗುಳ್ಟು ನವೀನ್ ಶಂಕರ್, ಪ್ರಮೋದ್, ಜಗಪತಿ ಬಾಬು ಮೊದಲಾದವರು ನಟಿಸಿದ್ದಾರೆ. ಸಲಾರ್ ಚಿತ್ರವನ್ನು ಹೊಂಬಾಳೆ ಫಿಲಂಸ್ ನಿರ್ಮಾಣ ಮಾಡಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!