ಹೊಸದಿಗಂತ ಡಿಜಿಟಲ್ ಡೆಸ್ಕ್:
ಡಾರ್ಲಿಂಗ್ ಪ್ರಭಾಸ್ (Prabhas) ನಟನೆಯ ಬಹುನಿರೀಕ್ಷಿತ ಸಿನಿಮಾ ‘ಸಲಾರ್’ (Salaar) ಟ್ರೈಲರ್ ರಿಲೀಸ್ ಆಗಿದೆ. 3 ನಿಮಿಷ 47 ಸೆಕೆಂಡ್ ಇರುವ ಈ ಟ್ರೈಲರ್‌ಗೆ ಉತ್ತಮ ರೆಸ್ಪಾನ್ಸ್ ಸಿಕ್ಕಿದೆ.
ಫ್ರೆಂಡ್‌ಶಿಪ್ ಜೊತೆ ಸೇಡಿನ ಕಥೆ ಆಧಾರಿತ ಈ ಸಿನಿಮಾದಲ್ಲಿ ರಕ್ತ ಸಿಕ್ತವಾಗಿ ಪ್ರಭಾಸ್ ಖಡಕ್ ಆಗಿ ಕಾಣಿಸಿಕೊಂಡಿದ್ದಾರೆ.
ಸಿನಿಮಾದ ನಿರ್ಮಾಣವನ್ನು ಹೊಂಬಾಳೆ ಸಂಸ್ಥೆ ಹೊತ್ತುಕೊಂಡಿದ್ದು, ಚಿತ್ರದಲ್ಲಿ ಪ್ರಭಾಸ್ ಮತ್ತು ಪೃಥ್ವಿರಾಜ್ ಜುಗಲ್‌ಬಂದಿಗೆ ಅಭಿಮಾನಿಗಳು ಫಿದಾ ಆಗಿದ್ದಾರೆ.
ಚಿತ್ರದಲ್ಲಿ ಕನ್ನಡದ ಗುಳ್ಟು ನವೀನ್ ಶಂಕರ್, ಪ್ರಮೋದ್, ಜಗಪತಿ ಬಾಬು, ಶ್ರುತಿ ಹಾಸನ್ ಸೇರಿದಂತೆ ಅನೇಕರು ನಟಿಸುವ ಮೂಲಕ ಗಮನ ಸೆಳೆದಿದ್ದಾರೆ. ಪ್ರಶಾಂತ್ ನೀಲ್ ಸಿನಿಮಾ ನಿರ್ದೇಶನ ಮಾಡಿದ್ದಾರೆ .