ಹೊಸ ದಿಗಂತ ವರದಿ,ಕುಶಾಲನಗರ:
ಶಾಲೆಯ ಬಳಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದಡಿ ಐವರನ್ನು ಕುಶಾಲನಗರ ಪೊಲೀಸರು ಬಂಧಿಸಿದ್ದಾರೆ.
ಆರೋಪಿಗಳಾದ ಚೇತನ್, ಕಿರಣ್ ಕುಮಾರ್, ಪ್ರವೀಣ್, ಸೂರ್ಯ, ಪ್ರತಾಪ್ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದ್ದು, ಅವರಿಂದ 30 ಸಾವಿರ ರೂ. ಬೆಲೆ ಬಾಳುವ ಒಂದು ಕೆ. ಜಿ 915 ಗ್ರಾಂ ಒಣಗಿದ ಗಾಂಜಾ, 2,910 ರೂ ನಗದು, ಒಂದು ಸ್ಕೂಟಿ, 3 ಬೈಕ್, ವಿವಿಧ ಕಂಪನಿಯ 6 ಮೊಬೈಲ್ ಪೋನ್’ಗಳನ್ನು ವಶಪಡಿಸಿಕೊಳ್ಳಲಾಗಿದೆ.
ಕೂಡುಮಂಗಳೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಕೃಷಿ ಕ್ಷೇತ್ರದ ಅವರಣದಲ್ಲಿರುವ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯ ಮುಂಭಾಗದ ಶಾಲೆಯ ವೇದಿಕೆಯ ಹತ್ತಿರದಲ್ಲಿ ಅಕ್ರಮವಾಗಿ ಗಾಂಜಾವನ್ನು ಮಾರಾಟ ಮಾಡುತ್ತಿರುವುದಾಗಿ ದೊರೆತ ಖಚಿತ ಮಾಹಿತಿಯ ಮೇರೆಗೆ ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣಾಧಿಕಾರಿ ಚಂದ್ರಶೇಖರ್ ನೇತೃತ್ವದ ತಂಡ ದಾಳಿ ಮಾಡಿತು.
ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ.
ಜಿಲ್ಲಾ ಪೋಲೀಸ್ ಅಧೀಕ್ಷಕ ಎಂ.ಎ.ಅಯ್ಯಪ್ಪ ಅವರ ನಿರ್ದೇಶನ, ಉಪ ಅಧೀಕ್ಷಕ ಆರ್.ವಿ. ಗಂಗಾಧರಪ್ಪ ಅವರ ಮಾರ್ಗದರ್ಶನ, ಕುಶಾಲನಗರ ವೃತ್ತ ನಿರೀಕ್ಷಕ ಬಿ.ಜೆ.ಮಹೇಶ್ ಸೂಚನೆಯಂತೆ ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣಾಧಿಕಾರಿ ಹೆಚ್.ವಿ. ಚಂದ್ರಶೇಖರ್, ಪಿ.ಎಸ್.ಐ ಭಾರತಿ, ಎ.ಎಸ್ ಐಗಳಾದ ಎಂ.ಎ. ಗೋಪಾಲ್, ಕುಮಾರಿ, ಸಿಬ್ಬಂದಿ ಗಳಾದ ಮಂಜುನಾಥ, ಅಜಿತ್, ಉದಯ, ಪ್ರಮೀಣ್, ಸುಧೀಶ್, ಪ್ರಕಾಶ್, ರಂಜಿತ್ ಕುಮಾರ್, ದಿವೇಶ್, ಶಾಫಿನ್ ಅಹಮದ್, ಮುನಾವರ್, ಪಾಷ, ಧನುಕುಮಾರ್ ಸಿ ಡಿ ಆರ್ ಘಟಕದ ಸಿಬ್ಬಂದಿ ರಾಜೇಶ್, ಗಿರೀಶ್, ಪ್ರವೀಣ್, ಚಾಲಕ ಯೋಗೇಶ್ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.