ಆಟೋದಲ್ಲಿ ಗಾಂಜಾ ಮಾರಾಟ: ಓರ್ವನ ಬಂಧನ

ಹೊಸದಿಗಂತ ವರದಿ, ಮಡಿಕೇರಿ:

ಗೋಣಿಕೊಪ್ಪ-ಮೈಸೂರು ಹೆದ್ದಾರಿಯಲ್ಲಿ ಆಟೋ ರಿಕ್ಷಾದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಗಾಂಜಾ ಮಾರಾಟದ ಕುರಿತು ಖಚಿತ ಮಾಹಿತಿ ದೊರೆತ ಹಿನ್ನೆಲೆಯಲ್ಲಿ ದಾಳಿ ಮಾಡಿದ ಪೊಲೀಸರು 400 ಗ್ರಾಂ ಗಾಂಜಾ ಸಹಿತ ಗೋಣಿಕೊಪ್ಪಲು ನಿವಾಸಿ ವಿ.ಎಸ್.ಗುರುದತ್ತ (30) ಎಂಬಾತನನ್ನು ವಶಕ್ಕೆ ಪಡೆದರು.
ಡಿವೈಎಸ್‌ಪಿ ನಿರಂಜನ್ ರಾಜೇ ಅರಸ್, ಸಿಪಿಐ ವಸಂತ್.ಕೆ.ಎಂ, ಪಿಎಸ್‌ಐ ಸಿದ್ದರಾಜು ಟಿ. ಹಾಗೂ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿದರು.
ಇವರ ಕಾರ್ಯಕ್ಷಮತೆಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.
ಮಾದಕ ವಸ್ತುಗಳನ್ನು ಬಳಸುವ ಹಾಗೂ ಮಾರಾಟ ಮಾಡುವ ವ್ಯಕ್ತಿಗಳು ಕಂಡುಬoದಲ್ಲಿ ಸ್ಥಳೀಯ ಪೊಲೀಸ್ ಠಾಣೆ ಅಥವಾ ಕೆ.ಎಸ್.ಪಿ ತಂತ್ರಾಶದ ಮೂಲಕ ಮಾಹಿತಿ ನೀಡುವಂತೆ ಎಸ್‌ಪಿ ಮನವಿ ಮಾಡಿದ್ದಾರೆ. ಅಕ್ರಮ ಚಟುವಟಿಕೆಗಗಳ ಕುರಿತು ಮಾಹಿತಿ ಒದಗಿಸುವವರ ವಿವರಗಳನ್ನು ಬಹಿರಂಗಪಡಿಸುವುದಿಲ್ಲವೆoದು ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!