Monday, October 2, 2023

Latest Posts

ಗಾಂಜಾ ಮಾರಾಟ: ಮಾಲು ಸಹಿತ ಇಬ್ಬರ ಬಂಧನ

ಹೊಸದಿಗಂತ ವರದಿ ಮಡಿಕೇರಿ:

ವೀರಾಜಪೇಟೆ ನಗರ ಪೊಲೀಸ್‌ ಠಾಣೆ ಸರಹದ್ದಿನಲ್ಲಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಗಳನ್ನು ಪತ್ತೆ ಹಚ್ಚುವಲ್ಲಿ ಕೊಡಗು ಜಿಲ್ಲಾ ಪೊಲೀಸರು ಯಶಸ್ವಿಯಾಗಿದ್ದು, ಇಬ್ಬರನ್ನು ಮಾಲು ಸಹಿತ ಬಂಧಿಸಿದ್ದಾರೆ. ಸಿದ್ದಾಪುರ ನಗರ ನಿವಾಸಿ ಅಭಿ (22) ಮತ್ತು ವೀರಾಜಪೇಟೆ ಸುಣ್ಣದ ಬೀದಿ ನಿವಾಸಿ ಹೆಚ್.ಎಸ್. ಸೂರ್ಯ (21) ಎಂಬವರು ಬಂಧನಕ್ಕೊಳಗಾದವರಾಗಿದ್ದು, ಅವರಿಂದ 294 ಗ್ರಾಂ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ.

ಜೂ.8ರ ರಾತ್ರಿ 12.10ರ ಸುಮಾರಿಗೆ ವೀರಾಜಪೇಟೆ-ಅಮತ್ತಿ ರಸ್ತೆಯ ಮಾರಿಯಮ್ಮ ದೇವಾಲಯದ ಬಳಿ ಮಾದಕ ವಸ್ತು ಗಾಂಜಾ ಮಾರಾಟ ಮಾಡುತ್ತಿರುವ ಬಗ್ಗೆ ದೊರೆತ ಖಚಿತ ಮಾಹಿತ ಆಧರಿಸಿ ದಾಳಿ ನಡೆಸಿದ ವೀರಾಜಪೇಟೆ ವೃತ್ತ ನಿರೀಕ್ಷಕ ಬಿ.ಎಸ್. ಶಿವರುದ್ರ, ವೀರಾಜಪೇಟೆ ನಗರ ಠಾಣಾಧಿಕಾರಿ ಶ್ರೀಧರ್ ನೇತೃತ್ವದ ತಂಡ ಆರೋಪಿಗಳನ್ನು ಮಾಲು ಸಹಿತ ಬಂಧಿಸುವಲ್ಲಿ ಯಶಸ್ವಿಯಾಗಿದೆ.

ಯುವಕ-ಯುವತಿಯರು ಮಾದಕ ವ್ಯಸನಿಗಳಾಗಿ ತಮ್ಮ ಜೀವನವನ್ನು ಹಾಳು ಮಾಡಿಕೊಳ್ಳುವುದನ್ನು ತಡೆಗಟ್ಟುವ ಸಲುವಾಗಿ ಮಾದಕ ವಸ್ತುಗಳನ್ನು ಬಳಸುವ ಹಾಗೂ ಮಾರಾಟ ಮಾಡುವ ವ್ಯಕ್ತಿಗಳು ಕಂಡುಬಂದಲ್ಲಿ ಸ್ಥಳೀಯ ಪೊಲೀಸ್ ಠಾಣೆ ಹಾಗೂ ಕೆ.ಎಸ್.ಪಿ ತಂತ್ರಾಂಶ/ಆಪ್‌ನ ಮೂಲಕ ಮಾಹಿತಿ ನೀಡಿ ಸಹಕರಿಸುವಂತೆ ಜಿಲ್ಲಾ ಪೊಲೀಸ್ ಅಧೀಕ್ಷಕ ಕೆ.ರಾಮರಾಜನ್ ಅವರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದು, ಮಾಹಿತಿ ಒದಗಿಸುವವರ ವಿವರಗಳನ್ನು ಬಹಿರಂಗ ಪಡಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!