ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಯೋಧ್ಯೆಯ ಶ್ರೀರಾಮಮಂದಿರದ ಪ್ರಸಾದದ ಹೆಸರಿನಲ್ಲಿ ಸ್ವೀಟ್ ಒಂದನ್ನು ಮಾರಾಟ ಮಾಡುತ್ತಿದ್ದ ಆನ್‌ಲೈನ್ ಶಾಪಿಂಗ್ ಸಂಸ್ಥೆಗೆ ಸರ್ಕಾರ ನೊಟೀಸ್ ನೀಡಿದೆ.
ಅಯೋಧ್ಯೆಯಲ್ಲಿ ಪ್ರಾಣಪ್ರತಿಷ್ಠೆಯೇ ಆಗದೆ ಪ್ರಸಾದ ವಿತರಣೆ ಹೇಗೆ ಸಾಧ್ಯ? ಜನರ ಧಾರ್ಮಿಕ ಭಾವನೆಗಳೊಂದಿಗೆ ಆಟವಾಡಿದಂತಾಗಿದೆ ಎಂದು ಅಖಿಲ ಭಾರತ ವ್ಯಾಪಾರಿಗಳ ಒಕ್ಕೂಟ ದೂರು ನೀಡಿತ್ತು. ಈ ಹಿನ್ನೆಲೆಯಲ್ಲಿ ಸರ್ಕಾರ ಸಂಸ್ಥೆಗೆ ನೊಟೀಸ್ ನೀಡಿದೆ.