July 20, 2026
Monday, July 20, 2026
spot_img

ರಾಜ್ ಬಿ ಶೆಟ್ಟಿ ನಟನೆಯ ‘ರಕ್ಕಸಪುರದೊಳ್’ ಸಿನಿಮಾ ಟ್ರೈಲರ್ ಗೆ ಸಲ್ಲು ಭಾಯಿ ಫಿದಾ!

ಹೊಸದಿಗಂತ ಡಿಜಿಟಲ್ ಡೆಸ್ಕ್ :

ಬಾಲಿವುಡ್​​ನ ಸ್ಟಾರ್ ನಟ ಸಲ್ಮಾನ್ ಖಾನ್​​ ಕನ್ನಡದ ‘ರಕ್ಕಸಪುರದೊಳ್’ ಸಿನಿಮಾದ ಟ್ರೈಲರ್ ನೋಡಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಈಗಾಗಲೇ ತೆರೆಕೊಂಡ ಸಿನಿಮಾ ಅದ್ದೂರಿ ಪ್ರದರ್ಶನ ಕಾಣುತ್ತಿದ್ದು, ಈ ನಡುವೆ ‘ರಕ್ಕಸಪುರದೊಳ್’ ಸಿನಿಮಾಕ್ಕೆ ಬಾಂದಳವಳ ಹೂಡಿದ್ದ ರವಿವರ್ಮಾ ಅವರು ‘ರಕ್ಕಸಪುರದೊಳ್’ ಸಿನಿಮಾದ ಟ್ರೈಲರ್ ಅನ್ನು ಸಲ್ಮಾನ್ ಖಾನ್ ಅವರಿಗೆ ತೋರಿಸಿದ್ದಾರೆ.

ರವಿವರ್ಮ ಅವರು ಸಲ್ಮಾನ್ ಖಾನ್ ಅವರ ಹಲವು ಸಿನಿಮಾಗಳಿಗೆ ಫೈಟ್​​ಗಳ ನಿರ್ದೇಶನ ಮಾಡಿದ್ದಾರೆ. ಹಾಗಾಗಿ ಸಲ್ಮಾನ್ ಖಾನ್ ಜೊತೆಗೆ ಅವರು ಆತ್ಮೀಯತೆ ಹೊಂದಿದ್ದಾರೆ. ಜೊತೆಗೆ ಸಲ್ಮಾನ್ ಅವರ ಹೊಸ ಸಿನಿಮಾ ‘ಗಲ್ವಾನ್’ಗೂ ರವಿವರ್ಮ ಸಾಹಸ ನಿರ್ದೇಶನ ಮಾಡುತ್ತಿದ್ದು, ಹೀಗಾಗಿ ಸಿನಿಮಾದ ಶೂಟಿಂಗ್ ವೇಳೆ ಟ್ರೈಲರ್ ಅನ್ನು ಸಲ್ಮಾನ್ ಖಾನ್ ಅವರಿಗೆ ತೋರಿಸಿದ್ದಾರೆ.

ಟ್ರೈಲರ್​​ನ ಗುಣಮಟ್ಟವನ್ನು ಕೊಂಡಾಡಿದ ಸಲ್ಲು, ಕನ್ನಡ ಚಿತ್ರರಂಗದಲ್ಲಿ ಸೃಜನಾತ್ಮಕ ಪ್ರಯತ್ನಗಳು ಸದಾ ವಿಭಿನ್ನವಾಗಿರುತ್ತವೆ ಎಂದಿದ್ದಾರೆ ಜೊತೆಗೆ ಸಿನಿಮಾದ ಹಿಂದಿ ಆವೃತ್ತಿ ಯಾವಾಗ ತೋರಿಸುತ್ತೀರ ಎಂದು ಕೇಳಿದ್ದಾರೆ. ಹೀಗಾಗಿ ಸಿನಿಮಾವನ್ನು ಹಿಂದಿಗೆ ಸಹ ಡಬ್ ಮಾಡಿ ಎಂಬ ಸಲಹೆಯನ್ನು ನೀಡಿದ್ದಾರೆ.

‘ರಕ್ಕಸಪುರದೊಳ್’ ಸಿನಿಮಾದಲ್ಲಿ ರಾಜ್ ಬಿ ಶೆಟ್ಟಿ ಶಿವ ಹೆಸರಿನ ಪೊಲೀಸ್ ಅಧಿಕಾರಿ ಪಾತ್ರದಲ್ಲಿ ನಟಿಸಿದ್ದಾರೆ. ಕುಡಿತದ ವ್ಯಸನ ಮತ್ತು ಮಾನಸಿಕ ಅಸ್ಥಿರತೆಯಿಂದ ಬಳಲುತ್ತಿರುವ ಪೊಲೀಸ್ ಒಬ್ಬ, ಹಳ್ಳಿಯಲ್ಲಿ ನಡೆಯುವ ನಿಗೂಢ ಕೊಲೆಗಳನ್ನು ಹೇಗೆ ಭೇದಿಸುತ್ತಾನೆ ಎನ್ನುವುದೇ ಈ ಸಿನಿಮಾದ ಕಥೆ. ಫೆಬ್ರವರಿ 6 ರಂದು ‘ರಕ್ಕಸಪುರದೊಳ್’ ಸಿನಿಮಾ ಬಿಡುಗಡೆ ಆಗಿದೆ. ಸಿನಿಮಾಕ್ಕೆ ಪ್ರೇಕ್ಷಕರಿಂದ ಸಕಾರಾತ್ಮಕ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !